ವಿಜಯನಗರ: ನಗರದಲ್ಲಿ ಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಕೆ.ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ನಗರ ಸೇರಿದಂತೆ ನಾನಾ ಕಡೆಯಿಂದ ಜನರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆಗೆ ಒಳಗಾದರು. ನೇತ್ರ ತಜ್ಞರು, ಹೃದಯರೋಗ ತಜ್ಞರು ಸೇರಿದಂತೆ ವಿವಿಧ ಖಾಯಿಲೆಗಳ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿ, ತಪಾಸಣೆ ನಡೆಸಿದರು. ಶಿಬಿರದಲ್ಲಿ ಭಾಗವಹಿಸಿದ ರೋಗಿಗಳಿಗೆ ಉಚಿತ ಮಾತ್ರೆ ಹಾಗೂ ಔಷಧಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲತಾ ಜೆ.ಎಸ್.,
ವಿಜಯನಗರ ಜಿಲ್ಲಾಧ್ಯಕ್ಷ ಸುನಿಲ್ ಕುಮಾರ್ ನಾಯ್ಕ್, ಬಲಿಜ ಯುವ ಸೇನೆ ಸಾಯಿ ಸುರ್ಜನ್, ಮಗಾನಂದ ಝಾನ್ಸಿ, ಮಂಜುನಾಥ್, ಯಾಕೂಬ್, ಮಂಜುನಾಥ್, ರಾಜ್ಯ ಪ್ರಶಸ್ತಿ ವಿಜೇತ ಮಧುಸೂಧನ್ ಸೇರಿದಂತೆ ರಾಜ್ಯ ಸಮಿತಿ ಪದಾಧಿಕಾರಿಗಳು, ನೂರಾರು ಕಾರ್ಯಕರ್ತರು ಇತರರು ಭಾಗವಹಿಸಿ ಯಶಸ್ವಿಗೊಳಿಸಿದರು. ಇದಕ್ಕೂ ಮುನ್ನ ವೈದ್ಯರು ಸೇರಿದಂತೆ ವಿವಿಧ ಗಣ್ಯರನ್ನು ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಇಮಾಮ್ ನಿಯಾಜಿ ಸೇರಿ ವಿವಿಧ ಗಣ್ಯರು ಸನ್ಮಾನಿಸಿ ಗೌರವಿಸಿದರು.