ಬಳ್ಳಾರಿ,ಅಕ್ಟೋಬರ್. 2 : ಶಾಸಕ ನಾರಾ ಭರತ್ ರೆಡ್ಡಿಯವರು ಬಳ್ಳಾರಿಯ ನಗರ ದೇವತೆ ತಾಯಿ ಶ್ರೀಕನಕದುರ್ಗಮ್ಮ ದೇವಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ಅಮ್ಮನವರ ದರ್ಶನ ಪಡೆದರು.
ನವರಾತ್ರಿ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಈ ವೇಳೆ ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಪಿ.ಗಾದೆಪ್ಪ ಹಾಗೂ ದೇವಸ್ಥಾನದ ಧರ್ಮಕರ್ತರು, ಅರ್ಚಕರು ಹಾಜರಿದ್ದರು.