ಬಳ್ಳಾರಿ.ಅ,25: ಅಸಮರ್ಥನೀಯ ಹಾಗೂ ಅತಾರ್ಕಿಕ ದತ್ತಾಂಶಗಳನ್ನು ಆಧರಿಸಿದ, ಒಳಮೀಸಲಾತಿ ವರ್ಗೀಕರಣವನ್ನು ಸಚಿವ ಸಂಪುಟ ಸಭೆಯಲ್ಲಿ ತಿರಸ್ಕರಿಸುವಂತೆ ಹಾಗೂ ಕಾಂತರಾಜು ಆಯೋಗದ ವರದಿಯನ್ನು ಬಹಿರಂಗ ಪಡಿಸುವಂತೆ ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ನಗರದ ಸ್ನೇಹ ಸಂಪುಟದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ರಾಜ್ಯ ಉಪಾಧ್ಯಕ್ಷರಾದ ಡಾ.ಹನುಮಂತಪ್ಪ, ರಾಜ್ಯ ಖಜಾಂಚಿ ರಮಣಪ್ಪ ಭಜಂತ್ರಿ, ಜಿಲ್ಲಾಧ್ಯಕ್ಷ ಶಂಕರಬ0ಡೆ ವೆಂಕಟೇಶ್, ಜಿಲ್ಲಾ ಕಾಯಾದರ್ಶಿ ಶ್ರೀನಿವಾಸ್, ಜಿಲ್ಲಾ ಖಜಾಂಚಿ ಕೆ,ರಂಗಸ್ವಾಮಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಕೆ.ನಾಗರಾಜ್ರವರು ಪರಿಶಿಷ್ಟ ಜಾತಿಯ ಒಳಮೀಸಲಾತಿಯ (ವರ್ಗೀಕರಣ) ಸಂಬAಧಿಸಿದAತೆ ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯದ ಪೀಠವು ತೀರ್ಪು ನೀಡಿದ್ದು ಸರಿಯಷ್ಟೆ ಈ ಬಗ್ಗೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತಾಗಿ ಅವೈಜ್ಞಾನಿಕ, ಅತಾರ್ಕಿಕ ಹಾಗೂ ಅಸಮರ್ಥನೀಯ ದತ್ತಾಂಶಗಳನ್ನು ಆಧರಿಸಿ ಒಳಮೀಸಲಾತಿ ವರ್ಗೀಕರಣಕ್ಕೆ ಮುಂದಾಗಿರುವುದು ಸಾಮಾಜಿಕ ನ್ಯಾಯದ ಕಗ್ಗೊಲೆಯಾಗಿದೆ.ಕಾರಣ ಪರಿಶಿಷ್ಟ ಜಾತಿಯ 101 ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಕುರಿತಾದ ಸಮಗ್ರ ಹಾಗೂ ವಸ್ತುನಿಷ್ಠ ಅಂಕಿಅಂಶಗಳ ಕುರಿತಾದ ಕೊರತೆ ಇದ್ದು, ಈ ಬಗ್ಗೆ ವೈಜ್ಞಾನಿಕ ಅಧ್ಯಯನ ಕೈಗೊಳ್ಳದೆ,
ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಏಕಾಏಕಿ ಒಳಮೀಸಲಾತಿ ವರ್ಗೀಕರಣ ಕುರಿತಾಗಿ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಅವರು ಖಂಡಿಸಿದರಲ್ಲದೆ ಸರ್ವೋಚ್ಚ ನ್ಯಾಯಾಲಯದ ತೀರ್ಪನ ಅನ್ವಯ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯಗಳ ನಡುವೆ ಒಳಮೀಸಲಾತಿ ಕಲ್ಪಿಸಲು ರಾಜ್ಯದಲ್ಲಿ 101 ಪರಿಶಿಷ್ಟ ಜಾತಿಗಳ ನಡುವಿನ ಮೀಸಲಾತಿ ಹಂಚಿಕೆಯ ಕುರಿತಾದ ಸಮಗ್ರ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಪ್ರಾತಿನಿದ್ಯವನ್ನು ಖಾತ್ರಿ ಪಡಿಸಲು ಸಮರ್ಥನೀಯ ಹಾಗೂ ವೈಜ್ಞಾನಿಕ ದತ್ತಾಂಶಗಳನ್ನು ಕ್ರೋಢಿಕರಿಸಿ, ವಿಶ್ಲೇಷಿಸಿ ತಜ್ಞರ ವರದಿಯನ್ನು ಪಡೆದುಕೊಳ್ಳದ ಹೊರತು,ಸರ್ಕಾರವು ಯಾವುದೇ ಕ್ರಮವನ್ನು ಕೈಗೊಳ್ಳದಂತೆ ಅವರು ಒತ್ತಾಯಿಸಿದರು.ಮುಂಬರುವ ಸಚಿವ ಸಂಪುಟ ಸಭೆಯಲ್ಲಿ,
ಸರ್ಕಾರವು ಏಕಾಏಕಿ ಪರಿಶಿಷ್ಟ ಜಾತಿಯ ಒಳಮೀಸಲಾತಿಯ ಕುರಿತಂತೆ ಅಸಮರ್ಥನೀಯ ಹಾಗೂ ಅತಾರ್ಕಿಕ ದತ್ತಾಂಶಗಳನ್ನು ಆಧರಿಸಿ ಯಾವುದೇ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳಬಾರದೆಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.2011ರ ಜನಗಣತಿಯ ಅಂಕಿ ಅಂಶಗಳನ್ನು ಪರಿಗಣಿಸದೇ, ರಾಜ್ಯದಲ್ಲಿ ಇತ್ತೀಚೆಗಿನ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ (ಜಾತಿ ಗಣತಿ -2016/ಕಾಂತರಾಜು ಆಯೋಗದ ವರದಿ)ಯ ವರದಿಯನ್ನು ಕೂಡಲೇ ಬಹಿರಂಗಗೊಳಿಸಿ, ಸದರಿ ವರದಿಯಲ್ಲಿರುವ ದತ್ತಾಂಶಗಳನ್ನು ಪರಿಗಣಿಸಬೇಕು.ಪರಿಶಿಷ್ಟ ಜಾತಿಯಲ್ಲಿ ಬರುವ 101 ಸಮುದಾಯಗಳ ಪೈಕಿ 51 ಜಾತಿಗಳು ಗುರುತಿಸಲ್ಪಟ್ಟ ಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳಾಗಿದ್ದು,ಇವುಗಳ ಸಾಮಾಜಿಕ ಹಿಂದುಳಿದಿರುವಿಕೆ, ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಮೀಸಲಾತಿ ಪ್ರಾತಿನಿಧ್ಯವನ್ನು ಕುರಿತಾದ ಸಮx-Àðನೀಯ ದತ್ತಾಂಶಗಳನ್ನು ಕ್ರೋಢಿಕರಿಸಿ ವೈಜ್ಞಾನಿಕ ವಾಗಿ ವಿಶ್ಲೇಷಿಸಲು ಸಾಮಾಜಿಕ ಶೈಕ್ಷಣಿಕ ಮತ್ತು ಕಾನೂನು ಪರಿಣಿತಿ ಯುಳ್ಳ ತಜ್ಞರ ಸಮಿತಿಯನ್ನು ಕೂಡಲೇ ರಚಿಸಬೇಕು,ಅಂತಹ ತಜ್ಞರ ಸಮಿತಿಯ ವರದಿ ಪಡೆದು 101ಜಾತಿಗಳ ಅಹವಾಲುಗಳನ್ನು ಮುಕ್ತವಾಗಿ ಅಲಿಸಿ ಸಮುದಾಯಗಳ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಚಿಂತಕರೊAದಿಗೆ ಸಮಾಲೋಚನೆ ನಡೆಸಿ, ನಂತರ ಪರಿಶಿಷ್ಟ ಜಾತಿ ಒಳಮೀಸಲಾತಿಯ(ವರ್ಗೀಕರಣ) ತಿರ್ಮಾನ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.