ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ
ಬಳ್ಳಾರಿ,ನ.08 : ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನ. 11 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ, ನ.11 ರ ಸಂಜೆ 06 ಗಂಟೆಯಿAದ ನ.13 ಸಂಜೆ 06.30 ಗಂಟೆಯವರೆಗೆ ಚುನಾವಣೆಗೆ ಸಂಬAಧಿಸಿದAತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ, ಮಾಧ್ಯಮಗಳು, ಟಿ.ವಿ. ವಾಹಿನಿಗಳಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ಸಂದರ್ಶನ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು, ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ, ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.
*ಎಕ್ಸಿಟ್ ಪೋಲ್ ನಿಷೇಧ:*
ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಜ್ಜು: ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ಜರುಗಲಿದ್ದು, ನ.11 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 2,36,100 ಮತದಾರರು ಇದ್ದು, 253 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಸಂಡೂರು ಕ್ಷೇತ್ರದಲ್ಲಿ 1,215 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಂ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಸಂಡೂರು ವಿಧಾನಸಭೆ ಉಪಚುನಾವಣೆ ನಿಮಿತ್ಯ ನ.13 ರಂದು ಬೆಳಿಗ್ಗೆ 07 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಅಂತ್ಯದ 48 ಗಂಟೆಗೂ ಮುನ್ನ ಅಂದರೆ ನ.11 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಸಂದರ್ಭದಲ್ಲಿ ವಾಹನಗಳ ಮೂಲಕ ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು. ನ.11 ರ ಸಂಜೆ 06 ರಿಂದ ನ.14 ಸಂಜೆ 06 ಗಂಟೆಯವರೆಗೆ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಅಡಿ ಪ್ರತಿಬಂಧಕಾಜ್ಞೆ ಜಾರಿಯಾಗಲಿದ್ದು, 05 ಕ್ಕಿಂತ ಹೆಚ್ಚು ಜನರು ಒಟ್ಟಾಗಿ ಓಡಾಡುವಂತಿಲ್ಲ. ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ಬಿಡಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ ಹಾಗೂ ಈ ಕ್ಷೇತ್ರಕ್ಕೆ ಹೊಂದಿಕೊAಡ ಕಂಪ್ಲಿ, ಕುರುಗೋಡು ಮತ್ತು ಬಳ್ಳಾರಿ ತಾಲ್ಲೂಕಗಳ 05 ಕಿ.ಮೀ ವ್ಯಾಪ್ತಿಯಲ್ಲಿ ನ.11 ರ ಸಂಜೆ 06 ಗಂಟೆಯಿAದ ನ.14 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಡ್ರೆöÊ ಡೇ ಆಚರಿಸಲು ಸೂಚಿಸಿದ್ದಾರೆ.
ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದAತೆ ಅಗತ್ಯ ಕ್ರಮ ವಹಿಸಲಾಗಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸಮ್ಮುಖದಲ್ಲಿ ರ್ಯಾಂಡಮೈಜೇಶನ್ ಮಾಡಿ, ಎಲ್ಲ ಪ್ರಕ್ರಿಯೆಗಳನ್ನು ಅವರ ಗಮನಕ್ಕೆ ತರಲಾಗಿದೆ ಎಂದು ಡಿಸಿ ಮಿಶ್ರಾ ಅವರು ತಿಳಿಸಿದ್ದಾರೆ.
ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರು, 253 ಮತಗಟ್ಟೆ:
ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರಿದ್ದಾರೆ. 1,17,789 ಪುರುಷ ಮತದಾರರು, 1,18,282 ಮಹಿಳೆ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಒಟ್ಟು 253 ಮತಗಟ್ಟೆ ಮತಕೇಂದ್ರಗಳಿವೆ.
*ಮತಗಟ್ಟೆಗಳಿಗೆ 1,215 ಸಿಬ್ಬಂದಿ ನೇಮಕ:*
ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಶಾಂತಿಯುತ ಹಾಗೂ ಚುನಾವಣಾ ಆಯೋಗದ ನಿಯಮಾನುಸಾರ ಮತದಾನ ಜರುಗಿಸಲು ಅಗತ್ಯ ಕ್ರಮ ವಹಿಸಲಾಗಿದೆ. ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು 304 ಮತಗಟ್ಟೆ ಅಧಿಕಾರಿಗಳು, 304 ಸಹಾಯಕ ಅಧಿಕಾರಿಗಳು, 608 ಮತದಾನ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 1,215 ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೂಕ್ಷö್ಮ ಮತ್ತು ಅತಿ ಸೂಕ್ಷö್ಮ ಮತಗಟ್ಟೆಗಳಿಗೆ ಹೆಚ್ಚುವರಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಪ್ರತಿ ಮತಗಟ್ಟೆಗಳಿಗೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಚುನಾವಣಾ ಜಾಹೀರಾತುಗಳಿಗೆ ಪೂರ್ವಾನುಮತಿ ಕಡ್ಡಾಯ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ನ.13 ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ನ.12 ಮತ್ತು 13 ರಂದು ಅಭ್ಯರ್ಥಿಗಳು ಮತ್ತು ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಜಾಹೀರಾತು ಪ್ರಕಟಿಸಬೇಕಾದರೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ (ಎಂಸಿಎAಸಿ) ವತಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿಯಿಂದ (ಎಂಸಿಎAಸಿ) ವಿವಿಧ ಮಾಧ್ಯಮಗಳಲ್ಲಿ ದಿನನಿತ್ಯ ಪ್ರಸಾರವಾಗುವ ರಾಜಕೀಯ ಜಾಹೀರಾತುಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ.
ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎಂಸಿಎAಸಿ ಸಮಿತಿಯ ಅನುಮತಿಯಿಲ್ಲದೆ ಚುನಾವಣಾ ರಾಜಕೀಯ ಜಾಹೀರಾತು ಪ್ರಕಟಿಸುವಂತಿಲ್ಲ, ಎಂಸಿಎAಸಿ ಸಮಿತಿಯ ಪೂರ್ವಾನುಮತಿ ಪಡೆದು ರಾಜಕೀಯ ಜಾಹೀರಾತು ಪ್ರಕಟಿಸಬೇಕು.
ವಿದ್ಯುನ್ಮಾನ ಮಾಧ್ಯಮ(ಎಲೆಕ್ಟಾçನಿಕ್)ಗಳಾದ ಟಿ.ವಿ, ರೇಡಿಯೋ, ಮೊಬೈಲ್ ಸಂದೇಶ, ಧ್ವನಿ ಮುದ್ರಿತ ಸಂದೇಶಗಳು, ಬಲ್ಕ್ ಎಸ್ಎಂಎಸ್ ಹಾಗೂ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಎಕ್ಸ್, ಇನ್ಸ್ಟಾಗ್ರಾಂಗಳಲ್ಲಿ ಜಾಹೀರಾತು ಮೂಲಕ ಪ್ರಚಾರ ಕೈಗೊಳ್ಳುವವರು ಎಂಸಿಎAಸಿ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.
ಮುದ್ರಣ ಮಾಧ್ಯಮಕ್ಕೆ ಸಂಬAಧಿಸಿದAತೆ ಮತದಾನದ ಪೂರ್ವ ದಿನವಾದ ನವೆಂಬರ್ 12 ಮತ್ತು 13 ರಂದು ಚುನಾವಣಾ ರಾಜಕೀಯ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.
ಅಭ್ಯರ್ಥಿಗಳು ಅಥವಾ ವ್ಯಕ್ತಿಗಳು ಚುನಾವಣಾ ರಾಜಕೀಯ ಜಾಹೀರಾತು ಪ್ರಸಾರ ಹಾಗೂ ಪ್ರಕಟಣೆಗೆ ನಿಗದಿತ ನಮೂನೆಯಲ್ಲಿ ಎಂಸಿಎAಸಿ ಸಮಿತಿಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.
ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ನವೆಂಬರ್ 12 ಮತ್ತು 13 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ನ.11 ರೊಳಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎAಸಿ)ಗೆ ಅರ್ಜಿ ಸಲ್ಲಿಸಬೇಕು.
*ಪೂರ್ವಾನುಮತಿಗೆ ಅರ್ಜಿ ಲಭ್ಯ:*
ನ.12 ಮತ್ತು 13 ರಂದು ಮುದ್ರಣ ಮಾಧ್ಯಮದಲ್ಲಿ ಜಾಹೀರಾತು ಪ್ರಕಟಿಸುವ ಸಲುವಾಗಿ ಅನುಮತಿ ಪಡೆಯಲು ಅಗತ್ಯವಿರುವ ನಿಗದಿತ ನಮೂನೆಯ ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಗಳ ಕಚೇರಿ ಆವರಣದ ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಕಚೇರಿಯಿಂದ ಪಡೆಯಬಹುದು.
ಚುನಾವಣೆಗೆ ಸಂಬAಧಿಸಿದAತೆ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಮಟ್ಟದ ಎಂಸಿಎAಸಿ ವತಿಯಿಂದ ನಿಗದಿತ ನಮೂನೆಯಲ್ಲಿ ಪೂರ್ವಾನುಮತಿ ಪಡೆಯದ ಜಾಹೀರಾತುಗಳನ್ನು ಸ್ಥಳೀಯ, ಪ್ರಾದೇಶಿಕ, ರಾಜ್ಯ ಹಾಗೂ ರಾಷ್ಟç ಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.