ಬಳ್ಳಾರಿ,ಮಾ.07 : ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಕೈಗೆತ್ತಿಕೊಳ್ಳಲಿರುವ ವಿವಿಧ ಕಾರ್ಯ ಯೋಜನೆಗಳು:
• 24-ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು.
• 07-ಹೊಸ ನಗರ ಆರೋಗ್ಯ ಕೇಂದ್ರಗಳು.
• 10-ಪ್ರಾಥಮಿಕ ಆರೋಗ್ಯ ಕೇಂದ್ರದಿಂದ 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೇಲ್ದರ್ಜೆಗೇರಿಸುವುದು.
• 04-ಹೊಸ ನಗರ ಸಮುದಾಯ ಆರೋಗ್ಯ ಕೇಂದ್ರಗಳು.
• 30 ಹಾಸಿಗೆಗಳ ಸಮುದಾಯ ಕೇಂದ್ರಗಳನ್ನು 50 ಹಾಸಿಗೆಗಳ FRU ಗಳಿಗೆ ಮೇಲ್ದರ್ಜೆಗೇರಿಸುವುದು- ಒಟ್ಟು 25
• ಕಮಲಾಪುರ, ಕಂಪ್ಲಿ, ಕುರಗೋಡು, ಶಹಬಾದ್, ಕುಕನೂರು, ಕಾರಟಗಿ, ಕನಕಗಿರಿಯಲ್ಲಿ 100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆಗಳನ್ನಾಗಿ ಪರಿವರ್ತಿಸಲಾಗುವುದು.
• ಸಿರಗುಪ್ಪ, ಸಂಡೂರು, ಭಾಲ್ಕಿ, ಸೇಡಂ, ಚಿತ್ತಾಪುರ, ಜೇವರ್ಗಿ, ಗಂಗಾವತಿ, ಕೂಡ್ಲಗಿ, ಶಹಾಪುರದಲ್ಲಿ 100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆಗಳನ್ನು 150 ಹಾಸಿಗೆಗಳ ವಿಭಾಗೀಯ ಆಸ್ಪತ್ರೆಗಳಾಗಿ ಮೇಲ್ದರ್ಜೇಗೇರಿಸುವುದು.
• ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲಾಗುವುದು.
• ಪೊಲೀಸ್ ಇಲಾಖೆಯ ಬಲವರ್ಧನೆಗಾಗಿ ಈ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಪ್ರಸ್ತುತ ಐದು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯದಳಗಳು (Bomb Detection and Disposal Squad) ಕಾರ್ಯ ನಿರ್ವಹಿಸುತ್ತಿದ್ದು, ಪ್ರಸಕ್ತ ವರ್ಷ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳನ್ನು ಸ್ಥಾಪಿಸಲಾಗುವುದು.
• ರಾಜ್ಯದಲ್ಲಿ ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸಲು ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಅಳವಡಿಸಲಾಗುವುದು.