ಬಳ್ಳಾರಿ, ಮೇ.13: ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರ ಪತ್ನಿ ವೈ. ಪ್ರೀತಿ (51) ಇವರು ಸೋಮವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರ ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಯಲಹಂಕದ ಎಂ.ಎಸ್. ಪಾಳ್ಯದಲ್ಲಿ ಇರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕುಟುಂಬದ ಸದಸ್ಯರು, ಆಪ್ತರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ವಿಧಿ ವಿಧಾನಗಳ ಪ್ರಕಾರ ನೆರವೇರಿತು.
ಮೃತರು ಪತಿ, ಇಬ್ಬರು ಪುತ್ರರು, ಬಂಧು ವರ್ಗ, ಮಿತ್ರರು ಹಾಗೂ ಆಪ್ತರನ್ನು ಅಗಲಿದ್ದಾರೆ.
ಸಂತಾಪ:
ಮೃತರ ಆತ್ಮಕ್ಕೆ ಶಾಂತಿಕೋರಿ ವೀರಶೈವ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಆಜೀವ ಸದಸ್ಯರು, ವೀರಶೈವ ಸಮಾಜದ ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಹಾಗೂ ಜನಪ್ರತಿನಿಧಿಗಳು, ಮುಖಂಡರು – ಕಾರ್ಯಕರ್ತರು ಮತ್ತು ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯವೈ.ಎಂ.ಸತೀಶರಿಗೆ ಪತ್ನಿ ವಿಯೋಗ
