ಬಳ್ಳಾರಿ, ಮೇ.13: ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರ ಪತ್ನಿ ವೈ. ಪ್ರೀತಿ (51) ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಯಲಹಂಕದ ಎಂ.ಎಸ್. ಪಾಳ್ಯದಲ್ಲಿ ಇರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕುಟುಂಬದ ಸದಸ್ಯರು, ಆಪ್ತರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ವಿಧಿ ವಿಧಾನಗಳ ಪ್ರಕಾರ ನೆರವೇರಿತು.
ಮೃತರು ಪತಿ, ಇಬ್ಬರು ಪುತ್ರರು, ಬಂಧು ವರ್ಗ, ಮಿತ್ರರು ಹಾಗೂ ಆಪ್ತರನ್ನು ಅಗಲಿದ್ದಾರೆ.
ಸಂತಾಪ:
ಬಿಜೆಪಿ ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರ ಪತ್ನಿ ನಿಧನರಾಗಿದ್ದು, ಅತ್ಯಂತ ನೋವನ್ನುಂಟು ಮಾಡಿದೆ, ಭಗವಂತ ಅವರ ಆತ್ಮಕ್ಕೆ ದೇವರು ಶಾಂತಿ, ನೆಮ್ಮದಿ ನೀಡಲಿ, ಮೃತರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಸoಸದ ವೈ.ದೇವೇಂದ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ, ಸಿರುಗುಪ್ಪ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಸೇರಿದಂತೆ ವಿವಿಧ ಗಣ್ಯರು ಪ್ರಾರ್ಥಿಸಿದ್ದಾರೆ.