ಬಳ್ಳಾರಿ,ಜು.17 : ನಗರದ ಅಲ್ಲೀಪುರ ಗ್ರಾಮದ ಹೊಸಪೇಟೆ – ಬೆಂಗಳೂರು ಬೈಪಾಸ್ ರಸ್ತೆಯ ಪಕ್ಕದ ಸರ್ವೀಸ್ ರಸ್ತೆಯ ಎಡಪಕ್ಕದಲ್ಲಿ ಯಾರೋ ಅನಾಮಧೇಯ ವ್ಯಕ್ತಿಗಳು ಜು.12 ರಂದು ನವÀಜಾತ ಹೆಣ್ಣು ಶಿಶುವನ್ನು ಬಿಟ್ಟುಹೋಗಿದ್ದು,
ಮಗುವನ್ನು ಬಿಎಂಸಿಆರ್ಸಿ ಗೆ ದಾಖಲಿಸಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಷಕರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಪೋಷಕರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392276461, ಮೊ.9480803049 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.