ಬಳ್ಳಾರಿ,ಆ.13 : ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಅಂಗನವಾಡಿ ಕಾರ್ಯಕರ್ತೆ, 34 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಹೊಸ ಅಧಿಸೂಚನೆಯನ್ವಯ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಳ್ಳಾರಿ ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಂಗನವಾಡಿ ಸಹಾಯಕಿಯರ ಹುದ್ದೆಯ ಅಧಿಸೂಚನೆ ರದ್ದಾಗಿದ್ದು, ಪ್ರಸ್ತುತ ಆ.12 ರಂದು ಹೊಸ ಅಧಿಸೂಚನೆ ಹೊರಡಿಸಲಾಗಿದ್ದು, ಆ.10 ರಿಂದ 12 ರ ವರೆಗೆ ಸಹಾಯಕಿಯರ ಹುದ್ದೆಗಳಿಗೆ ಸಲ್ಲಿಸಿದ ಬಳ್ಳಾರಿ ತಾಲ್ಲೂಕಿನ ಅಭ್ಯರ್ಥಿಗಳು ಹೊಸ ಅಧಿಸೂಚನೆಯನ್ವಯ ಪುನಃ ಅರ್ಜಿ ಸಲ್ಲಿಸಬೇಕು. ಈ ಹಿಂದೆ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನ. ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಸೆ.13 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ ಹಾಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ವೆಬ್ಸೈಟ್ hಣಣಠಿs://ಞಚಿಡಿಟಿemಚಿಞಚಿoಟಿe.
ಹೆಚ್ಚಿನ ಮಾಹಿತಿಗಾಗಿ ದೇವಿನಗರದ ಸ್ತಿçÃಸೇವಾ ನಿಕೇತನಾ ಆವರಣದ ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.08392 – 266080 ಗೆ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೋಹನಕುಮಾರಿ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.