ಅಸ್ತಿತ್ವದಲ್ಲಿರುವ ಚುನಾವಣಾ ವೆಚ್ಚದ ಮೇಲ್ವಿಚಾರಣೆಯನ್ನು ಬಲಪಡಿಸಲು ವೀಕ್ಷಕರನ್ನು ನೇಮಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಕರ್ನಾಟಕವಷ್ಟೇ ಅಲ್ಲದೆ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳಿಗೂ ವಿಶೇಷ ಅಧಿಕಾರಿಯನ್ನು ನೇಮಿಸಲಾಗಿದೆ.
2019ಕ್ಕೆ ಹೋಲಿಸಿದರೆ 2024 ರ ಲೋಕಸಭೆ ಚುನಾವಣೆಗೆ ಚುನಾವಣಾ ನೀತಿ ಸಂಹಿತೆ (MCC) ಜಾರಿಯಾದ ಕೇವಲ 10 ದಿನಗಳಲ್ಲಿ ವಶಪಡಿಸಿಕೊಳ್ಳುವುತ್ತಿರುವುದು ಶೇ.110.12ರಷ್ಟು ಹೆಚ್ಚಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ (CEO) ಕಚೇರಿ ಮಾಹಿತಿ ನೀಡಿದೆ.
ಚುನಾವಣೆಗಾಗಿ ಚುನಾವಣಾ ಆಯೋಗವು 2,357 ಫ್ಲೈಯಿಂಗ್ ಸ್ಕ್ವಾಡ್, 2,669 ಕಣ್ಗಾವಲು ಪಡೆ, 647 ವಿಡಿಯೋ ಕಣ್ಗಾವಲು, 258 ಲೆಕ್ಕಪತ್ರ ನಿರ್ವಹಣೆ ಮತ್ತು 257 ವಿಡಿಯೋ ವೀಕ್ಷಣೆ ತಂಡಗಳನ್ನು ನಿಯೋಜಿಸಿದೆ. ಅಲ್ಲದೆ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಗೋವಾ ಮತ್ತು ಮಹಾರಾಷ್ಟ್ರದ ಗಡಿಗಳಲ್ಲಿ ಚೆಕ್ ಪೋಸ್ಟ್ಗಳಲ್ಲಿ 172 ಪೊಲೀಸರು ಮತ್ತು 40 ಅಬಕಾರಿ ತಂಡಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, ಗಡಿಯಲ್ಲಿ 19 ಅರಣ್ಯ ಚೆಕ್ ಪೋಸ್ಟ್ ಮತ್ತು 15 ಸಾರಿಗೆ ಚೆಕ್ ಪೋಸ್ಟ್ಗಳನ್ನೂ ಸ್ಥಾಪಿಸಿದೆ.