ಬಳ್ಳಾರಿ,ಏ.16 : ರಾಜ್ಯ ಸರ್ಕಾರದ ಪಂಚಗ್ಯಾರAಟಿ ಯೋಜನೆಗಳಿಂದ ಬಡ ಜನರ ಏಳ್ಗೆಗೆ ಪೂರಕವಾಗಿದ್ದು, ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗ್ರಾಪಂ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಪ್ರಚಾರ ಮೂಡಿಸುವ ಕಾರ್ಯವಾಗಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ ಕೆ.ಇ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ನ ಹಳೆಯ ನಜೀರ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಡುಬಡವರು ಮತ್ತು ಅಹಾಯಕ ಕುಟುಂಬಗಳಿಗಾಗಿಯೇ ನೆರವು ನೀಡಲು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈಗಾಗಲೇ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಪ್ರಮಾಣದ ಅರ್ಹರು ಇದರ ಲಾಭ ಪಡೆಯುತ್ತಿದ್ದಾರೆ. ಅದೇರೀತಿಯಾಗಿ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಗ್ಯಾರಂಟಿ ಯೋಜನೆಗಳ ಲಾಭ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದರು.
ಗೃಹಲಕ್ಷಿö್ಮ ಯೋಜನೆಯಡಿ ನೋಂದಣಿಯಾದ ಫಲಾನುಭವಿಗಳಿಗೆ ಆಗಸ್ಟ್ 2023 ರಿಂದ ಡಿಸೆಂಬರ್ 2024 ರವರೆಗೆ ರೂ.2,000 ರಂತೆ ಒಟ್ಟು 43,92,946 ಫಲಾನುಭವಿಗಳಿಗೆ ಮಾಹೆವಾರು ಒಟ್ಟು 878,58,92,000 ರೂ. ಗಳು ಸರ್ಕಾರದಿಂದ ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. 2025 ರ ಜನವರಿ ತಿಂಗಳ ಹಣವು ಪಾವತಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ಕುಮಾರ್ ಅವರು ಸಭೆಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಪ್ರತಿಕ್ರಿಯಿಸಿ, ಗೃಹಲಕ್ಷಿö್ಮ ಯೋಜನೆಯಡಿ ನೋಂದಾಯಿಸಿಕೊAಡ ಫಲಾನುಭವಿಗಳಲ್ಲಿ ಎನ್ಪಿಸಿಐ ಸಮಸ್ಯೆ, ತೀರಿಹೋದವರು ಮತ್ತು ಐಟಿ-ಜಿಎಸ್ಟಿ ಸಂಬAಧಿತ ಕಾರಣಗಳಿಂದ ಸೌಲಭ್ಯ ವಂಚಿತರಾದ ಫಲಾನುಭವಿಗಳ ನಿಖರ ಮಾಹಿತಿ ಕಂಡುಕೊಳ್ಳಬೇಕು. ಇದರಿಂದ ಯೋಜನೆಯ ಹಣ ಪೋಲಾಗದಂತೆ ತಡೆಯಬಹುದು ಎಂದು ತಿಳಿಸಿದರು.
ಎನ್ಪಿಸಿಐ ಲಿಂಕ್ ಆಗದ ಫಲಾನುಭವಿಗಳು ಮತ್ತು ಫಲಾನುಭವಿಗಳ ವಯೋಸಹಜದಿಂದ ಮರಣ ಹೊಂದಿದವರ ಮಾಹಿತಿ ಗುರುತಿಸಲು ತಾಪಂ ಇಒ, ಗ್ರಾಪಂ ಪಿಡಿಒ ಮತ್ತು ಲೀಡ್ ಬ್ಯಾಂಕ್ ಅಧಿಕಾರಿಗಳನ್ನೊಂಡು ಗ್ರಾಪಂ ಮಟ್ಟದಲ್ಲಿ ವಿಶೇಷ ಕ್ಯಾಂಪೇನ್ ಗಳನ್ನು ಆಯೋಜಿಸಬೇಕು ಎಂದು ನಿರ್ದೇಶನ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಜುಲೈ 2023 ರಿಂದ ಡಿಸೆಂಬರ್ 2024 ರವರೆಗೆ ಜಿಲ್ಲೆಯಲ್ಲಿ ಒಟ್ಟು 1,81,10,436 ಫಲಾನುಭವಿಗಳಿಗೆ ಇದುವರೆಗೂ ಒಟ್ಟು 292.29 ಕೋಟಿ ರೂ. ಗಳ ಸಹಾಯಧನ ನೀಡಲಾಗಿದೆ. 2025ರ ಜನವರಿ ಮಾಹೆಯ ಡಿಬಿಟಿ ಯ ಅನುದಾನ ಬಿಡುಗಡೆಯಾಗಿಲ್ಲ, ಉಳಿದ ಫೆಬ್ರವರಿ ಮತ್ತು ಮಾರ್ಚ್ ಮಾಹೆಯ ಹೆಚ್ಚುವರಿ ಅಕ್ಕಿಯನ್ನು ರಾಜ್ಯ ಸರ್ಕಾರವು ನಿರ್ದೇಶನದಂತೆ ಅಕ್ಕಿ ವಿತರಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಅವರು ಸಭೆಗೆ ತಿಳಿಸಿದರು.
ಅಧ್ಯಕ್ಷರಾದ ಚಿದಾನಂದಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಾಗಿ ಅಕ್ರಮ ಪಡಿತರ ಸಾಗಾಣೆ ಸಂಬAಧಿಸಿದAತೆ ಪ್ರಕರಣಗಳು ದಾಖಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಒಟ್ಟು 3,18,885 ಅರ್ಹ ಗ್ರಾಹಕರಿದ್ದು, ಅದರಲ್ಲಿ ಈವರೆಗೆ (ಮಾ.31 ರ ವರೆಗೆ) 2,82,956 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. 35,929 ಗ್ರಾಹಕರು ನೋಂದಾಯಿಸಲು ಬಾಕಿಯಿದ್ದಾರೆ. ಸರ್ಕಾರವು 2023ರ ಆಗಸ್ಟ್ನಿಂದ 2025ರ ಮಾರ್ಚ್ವರೆಗೆ ಒಟ್ಟು 277.02 ಕೋಟಿ ರೂ. ಪಾವತಿಸಿದೆ ಎಂದು ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.
ಇದಕ್ಕೆ ಅಧ್ಯಕ್ಷರು ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಅನಧೀಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿರುವವರನ್ನು ಗುರುತಿಸಿ ವಿದ್ಯುತ್ ಮೀಟರ್ ಸಂಪರ್ಕ ಪಡೆಯಲು ತಿಳಿಸಬೇಕು. ಬಾಡಿಗೆ ಮನೆ ಬದಲಾಯಿಸುವವರ ಯೋಜನೆ ಪಡೆಯಲು ಲಿಂಕಿAಗ್ ಮತ್ತು ಡಿ-ಲಿಂಕಿAಗ್ ಮಾಹಿತಿಯು ಸಹ ಪೂರಕವಾಗಿರಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಬಳ್ಳಾರಿ ವಿಭಾಗದ ಸಾರಿಗೆ ಇಲಾಖೆಯ ಬಸ್ಗಳಲ್ಲಿ ಜೂನ್-2023 ರಿಂದ ಮಾರ್ಚ್-2025 ರವರೆಗೆ ಮಹಿಳಾ ವಯಸ್ಕರು ಮತ್ತು ಹೆಣ್ಣು ಮಕ್ಕಳು ಸೇರಿ ಒಟ್ಟು 4,52,37,755 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, 167,99,61,992 ರೂ. ಗಳು ಸಾರಿಗೆ ಆದಾಯ ಹೊಂದಲಾಗಿದೆ ಎಂದು ಕ.ಕ.ಸಾರಿಗೆ ಸಂಸ್ಥೆಯ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದರು.
ಯುವ ನಿಧಿ ಯೋಜನೆಯಡಿ ಫೆಬ್ರವರಿ-2025 ಮಾಹೆವರೆಗೆ ಜಿಲ್ಲೆಯ 7,618 ನಿರುದ್ಯೋಗಿ ಅಭ್ಯರ್ಥಿಗಳು ನೋಂದಾಯಿಸಿದ್ದು, ಈವರೆಗೆ 9,79,38,000 ರೂ. ಫಲಾನುಭವಿಗಳಿಗೆ ಜಮೆ ಮಾಡಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿಗಳು ಸಭೆಗೆ ತಿಳಿಸಿದರು.
ಇದಕ್ಕೆ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ನಿರುದ್ಯೋಗಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿದಲ್ಲಿ ಅವುಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಕಾಲೇಜು ಮಟ್ಟದಲ್ಲಿ ವಿಶೇಷ ನೋಂದಣಿ ಶಿಬಿರ ಆಯೋಜಿಸಬೇಕು. ಹೆಚ್ಚು ಅರ್ಹ ನಿರುದ್ಯೋಗ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳುವAತೆ ಜಾಗೃತಿ ಮತ್ತು ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಧ್ಯಕ್ಷರು ಮಾತನಾಡಿ, ಅಧಿಕಾರಿಗಳು ತಮ್ಮ ಸೇವಾ ಮನೋಭಾವದಿಂದ ಕೆಲಸ ನಿರ್ವಹಿಸಬೇಕು. ಸರ್ಕಾರ ಯೋಜನೆಗಳನ್ನು ಜನ ಸಾಮಾನ್ಯರಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಕಾಲದಲ್ಲಿ ಅವರಿಗೆ ಸೇವೆ ಒದಗಿಸಿದಾಗ ಮಾತ್ರ ಯೋಜನೆಗಳಿಗೆ ಸಾರ್ಥಕತೆ ದೊರಕುತ್ತದೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಸರ್ಕಾರದ ಮೇಲೆ ಉತ್ತಮ ಅಭಿಪ್ರಾಯ ಮೂಡುತ್ತದೆ ಎಂದರು.
*ಗ್ಯಾರAಟಿ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಿ:*
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಮತ್ತು ವಂಚಿತರಾಗದAತೆ ಮಾಡಲು ಗ್ಯಾರಂಟಿ ಯೋಜನೆಗಳ ಬಗೆಗಿನ ತಾಂತ್ರಿಕ ದೋಷಗಳನ್ನು ನಿವಾರಿಸಲು ಗ್ರಾಮ ಸಭೆಗಳಂತೆ ಆಯಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಬೇಕು ಎಂದು ಐದು ತಾಪಂ ಇಒ ಗಳಿಗೆ ಜಿಪಂ ಸಿಇಒ ಮತ್ತು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಆಶಾ ಲತಾ ಸೋಮಪ್ಪ, ಬಳ್ಳಾರಿ ತಾಲ್ಲೂಕು ಅಧ್ಯಕ್ಷ ಗೋನಾಳ್ ನಾಗಭೂಷಣ ಗೌಡ, ಕುರುಗೋಡು ತಾಲ್ಲೂಕು ಅಧ್ಯಕ್ಷ ನಾಗೇನಹಳ್ಳಿ ಮಲ್ಲಿಕಾರ್ಜುನ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ, ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಂಗನಾಥಬಾಬು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿಗಳು ಸೇರಿದಂತೆ ಐದು ತಾಲ್ಲೂಕುಗಳ ತಾಪಂ ಇಒ ಗಳು ಹಾಗೂ ಇತರರು ಉಪಸ್ಥಿತರಿದ್ದರು.