ಬೆಂಗಳೂರು,ಜ,೧೮: ಫೆಬ್ರವರಿ ಬಜೆಟ್ ಮಂಡನೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳ ಸಭೆ ಕರೆದಿದ್ದಾರೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಚರ್ಚೆ ಸಾಧ್ಯತೆ ಎನ್ನಲಾಗುತ್ತಿದೆ. ಅಲ್ಲದೆ ಸಂವಿಧಾನದ ಅನುಚ್ಛೇದ ೩೪೧ ಕ್ಕೆ ತಿದ್ದುಪಡಿ ತರುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ.ಕೇಂದ್ರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಚಿವ ಮಹದೇವಪ್ಪ ಮನೆಯಲ್ಲಿ ದಲಿತ ನಾಯಕರ ಸಭೆ: ಸಂಪುಟ ಸಭೆಗೂ ಮುನ್ನ ಇಂದು ಸಚಿವ ಹೆಚ್ ಸಿ ಮಹದೇವಪ್ಪ ಮನೆಯಲ್ಲಿ ದಲಿತ ನಾಯಕರ ಉಪಾಹಾರ ಸಭೆ ನಡೆದಿದ್ದು ಕುತೂಹಲ ಕೆರಳಿಸಿದೆ. ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿರುವುದರಿಂದ ದಲಿತ ನಾಯಕರು ಫುಲ್ ಅಲರ್ಟ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದಿನ ಸಂಪುಟ ಸಭೆಯಲ್ಲಿ ಬಸವಣ್ಣ ಕರ್ನಾಟಕದ ಸಂಸ್ಕೃತಿಕ ರಾಯಭಾರಿಯಾಗಿ ಘೋಷಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.