ಬಳ್ಳಾರಿ,ಫೆ.03 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಫೆ.04 ರಂದು ಬೆಳಿಗ್ಗೆ 09 ಗಂಟೆಗೆ ಪ್ರಚಾರ ಜಾಥಾ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಿಂದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಚಾಲನೆ ನೀಡುವರು. ಜಾಗೃತಿ ಜಾಥವು ನಗರದ ವಿವಿಧ ಸ್ಥಳಗಳಲ್ಲಿ ಸಂಚರಿಸಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ.
ಜಾಥಾ ಮಾರ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಸಂಗಮ್ ವೃತ್ತ, ಗಡಿಗಿ ಚೆನ್ನಪ್ಪ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಮರಳುತ್ತದೆ.