ಬಳ್ಳಾರಿ,ಮಾ.01.ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಸಮಿತಿ ಮೀನುಗಾರರ ಘಟಕದ ಅಧ್ಯಕ್ಷರಾದ ಮಂಜುನಾಥ್ ಬಿ.ಸುಣಗಾರ್ ಅವರ ಆದೇಶದ ಮೇರೆಗೆ ಯುವಜನ ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ನಾಗೇಂದ್ರ ರವರ ಶಿಫಾರಸ್ಸು ಹಾಗೂ ಅಖಿಲ ಭಾರತ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಅನುಮೋದನೆಯ ಮೇರೆಗೆ ಚಂಪಾ ಚವಾಣ್ ಅವರನ್ನು ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಮೀನುಗಾರರ ಘಟಕದ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ, ಕೂಡಲೇ ಈ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಂಘಟನೆಯ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಸಮರ್ಪಣ ಭಾವದಿಂದ ಶ್ರಮಿಸಬೇಕೆಂದು ಕಾಂಗ್ರೆಸ್ ಪಕ್ಷ ಸೂಚಿಸಿದೆ.
ಪ್ರಸ್ತುತ ಚಂಪಾ ಚವಾಣ್ ಅವರು ಕರ್ನಾಟಕ ರಾಜ್ಯ ಪಾರ್ವತಿ ಬಂಜಾರ ಮಹಿಳಾ ಒಕ್ಕೂಟದ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುವಲ್ಲಿ ಗುರುತಿಸಿಕೊಂಡಿದ್ದಾರೆ, ಇವರು ಕಾಂಗ್ರೆಸ್ ಪಕ್ಷದ ಮಹಿಳಾ ಮುಖಂಡರಾಗಿ ಚುನಾವಣೆಯ ಸಂದರ್ಭದಲ್ಲಿ ಪ್ರತಿಯೊಂದು ಹಳ್ಳಿಗಳಿಗೆ ತೆರಳಿ ಪಕ್ಷಕ್ಕೆ ಬೆಂಬಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ದರು.
ಇವರ ಸೇವೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ಆದೇಶದ ಮೇರೆಗೆ ಯುವಜನ ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ರವರ ಶಿಫಾರಸ್ಸಿನ ಮೇರೆಗೆ ಮತ್ತು ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಮೀನುಗಾರರ ಘಟಕದ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.