ಬಳ್ಳಾರಿ, ಏ.20: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆಗೈದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಒತ್ತಾಯಿಸಿದೆ.
ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಚಾನಾಳ್ ಶೇಖರ್ ಪತ್ರಿಕಾ ಹೇಳಿಕೆ ನೀಡಿ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠರವರ ಹತ್ಯೆ ಪ್ರಕರಣವನ್ನು ಮಹಾಸಭಾದ ಬಳ್ಳಾರಿ ಜಿಲ್ಲಾ ಘಟಕ ಉಗ್ರವಾಗಿ ಖಂಡಿಸುತ್ತದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾಸಭೆಯು ಮಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಮುಂದಿನ ದಿನಗಳಲ್ಲಿ
ಈ ರೀತಿಯ ಕೃತ್ಯಗಳು ನಡೆಯದಂತೆ ಅಗತ್ಯ ಕ್ರಮಕೈಗೊಳ್ಳಲು ಹಾಗೂ ವಿದ್ಯಾರ್ಥಿನಿಯ ಬರ್ಬರ ಹತ್ಯೆಗೆದಿರುವ ವ್ಯಕ್ತಿಗೆ ಮತ್ತು ಅವನಿಗೆ ಸಹಕಾರ ನೀಡಿರುವ ಎಲ್ಲಾ ವ್ಯಕ್ತಿಗಳಿಗೂ ಕಠಿಣ ಶಿಕ್ಷೆಯನ್ನು ವಿಧಿಸುವಂತೆ ಒತ್ತಾಯಿಸುತ್ತದೆಂದಿದ್ದಾರೆ.