ಬಳ್ಳಾರಿ,ಫೆ.20: ಛತ್ರಪತಿ ಶಿವಾಜಿ ಮಹಾರಾಜರು ಭಾರತದ ಅತ್ಯಂತ ಧೈರ್ಯಶಾಲಿ, ಪ್ರಗತಿಪರ ಮತ್ತು ಸಂವೇದನಾಶೀಲ ಆಡಳಿತಗಾರರಲ್ಲಿ ಒಬ್ಬರು. ಅವರು ಮರಾಠ ಸಾಮ್ರಾಜ್ಯದ ಸ್ಥಾಪಕರಾಗಿದ್ದರು. ಸ್ವರಾಜ್ಯ ಮೌಲ್ಯ ಮತ್ತು ಮರಾಠಾ ಪರಂಪರೆಯನ್ನು ತಮ್ಮ ಆಡಳಿತ ಕೌಶಲ್ಯದಿಂದ ಇತಿಹಾಸದಲ್ಲಿ ಅಚ್ಚಳಿಯಾಗಿ ಉಳಿಯುವಂತೆ ಮಾಡಿದವರು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜಕುಮಾರ್ ರಸ್ತೆಯ ಬಿ.ಡಿ.ಎ.ಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ, ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಶಿವಾಜಿ ಮಹಾರಾಜರು ತನ್ನ ಮರಾಠ ಸೈನ್ಯದ ಮೂಲಕ ಗೆರಿಲ್ಲಾ ಹೋರಾಟದ ತಂತ್ರಗಳನ್ನು ಪರಿಚಯಿಸಿದ ಮೊದಲ ವ್ಯಕ್ತಿ. ಮೊಘಲರ ವಿರುದ್ಧ ಹಲವಾರು ಯುದ್ಧಗಳನ್ನು ಗೆದ್ದ ಅವರ ಶೌರ್ಯ ಮತ್ತು ತಂತ್ರಗಳಿಗೆ ಹೆಸರುವಾಸಿಯಾಗಿದ್ದರು ಎಂದು ತಿಳಿಸಿದರು.
ಕರ್ನಾಟಕ ಮರಾಠ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಸೇನೆಯ ಯುವಘಟಕದ ರಾಜ್ಯಾಧ್ಯಕ್ಷ ವಿನೋದ್ ಎಂ.ಚವ್ಹಾಣ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರ ವೀರಗಾಥೆಗಳು ಇತಿಹಾಸದ ಪುಟಗಳಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿದೆ. ಅದರ ಬಗ್ಗೆ ಇಡೀ ದೇಶವು ಜಾಗೃತವಾಗಿದೆ ಎಂದರು.
ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ, ಸ್ವರಾಜ್ಯ ಸಂಕಲ್ಪ, ಗುರು ಭಕ್ತಿ, ರಾಜತಾಂತ್ರಿಕತೆ, ಚಾಣಾಕ್ಷತೆ, ಯುದ್ಧ ನಿಪುಣತೆ, ಮತ್ತು ಯುದ್ಧ ಕೌಶಲ್ಯಗಳು ಹೀಗೆ ಛತ್ರಪತಿ ಶಿವಾಜಿ ಮಹಾರಾಜರ ಬಾಲ್ಯದಿಂದ – ಛತ್ರಪತಿ ಆದವರೆಗಿನ ಯಶೋಗಾಥೆಗಳನ್ನು ಸಾಹಸಗಳನ್ನು, ದಿಟ್ಟತನವನ್ನು ಒಂದೊಂದಾಗಿ ತಿಳಿಯಪಡಿಸಿದರು.
ಕಾರ್ಯಕ್ರಮದಲ್ಲಿ ಜಯತೀರ್ಥ ಜಾಗೀರದಾರ್ ತಂಡದಿಂದ ವಚನ ಗಾಯನ ಪ್ರಸ್ತುತ ಪಡಿಸಿದರು.
ಮಹಾನಗರ ಪಾಲಿಕೆಯ ಉಪಮೇಯರ್ ಬಿ.ಜಾನಕಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಎಂ.ಶಿವಾಜಿರಾವ್ ಸೇರಿದಂತೆ ಸಮಾಜದ ಮುಖಂಡರುಗಳಾದ ಯಶವಂತರಾವ್ ಜಗತಾಪ್, ಅನಿತಾ ಸಾಳುನ್ಕೆ, ನಾಗರಾಜ್ ಚವ್ಹಾಣ್, ದಿನೇಶ್ ನಲವಡೆ, ಶಂಕರ್ ಗಾಯಕವಾಡ್ ಹಾಗೂ ಮುಖಂಡರು, ಇನ್ನೀತರರು ಉಪಸ್ಥಿತರಿದ್ದರು.
ಸಂಭ್ರಮದ ಮೆರವಣಿಗೆ:
ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡೊಳ್ಳು ವಾದ್ಯ, ತಾಷೆ ರಾಂಡೋಲ್ ಸೇರಿದಂತೆ ವಿವಿಧ ಸಾಂಸ್ಕøತಿಕ ಕಲಾತಂಡಗಳು ಭಾಗವಹಿಸಿ, ಮೆರಗು ನೀಡಿದವು.
ಮೆರವಣಿಗೆಗೆ ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತಾ ಅವರು ಚಾಲನೆ ನೀಡಿದರು.
ಮೆರವಣಿಗೆಯು ಶ್ರೀ ಪಾಂಡುರಂಗ ದೇವಸ್ಥಾನದಿಂದ ಆರಂಭವಾಗಿ ಕಾಳಮ್ಮ ಬೀದಿ ಮೂಲಕ ಹಳೆ ಬ್ರೂಸ್ಪೇಟೆ ಪೆÇಲೀಸ್ ಠಾಣೆ ಮಾರ್ಗವಾಗಿ ತೇರು ಬೀದಿ, ಹೆಚ್.ಆರ್ ಗವಿಯಪ್ಪ ಮಾರ್ಗವಾಗಿ ಹಳೇ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಬಿಡಿಎಎ ಫುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದವರೆಗೆ ಸಾಗಿಬಂದು ಸಂಪನ್ನಗೊಂಡಿತು.