ದಾವಣಗೆರೆ.ಫೆ. 03: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಸಹಯೋದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆಯನ್ನು KUWJ ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿದ್ದರು.
ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ , ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಮಾಯ್ಕೊಂಡ ಬಸಂತಪ್ಪ, ಡಿ.ಜಿ.ಶಾಂತನಗೌಡರು, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾದ ಜಿ.ಬಿ.ವಿನಯ್ ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಇ.ಎಂ.ಮಂಜುನಾಥ್ ಸಮ್ಮೇಳನದ ಆಶಯಗಳನ್ನು ಆಡಿದರು.