ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಈ ಯೋಜನೆಯಿಂದ ನಿತ್ಯ 60 ಲಕ್ಷದಂತೆ ವಾರಕ್ಕೆ 1.80 ಕೋಟಿ ಮಕ್ಕಳು ಲಾಭ ಪಡೆಯಲಿದ್ದಾರೆ.
ಬೆಂಗಳೂರು, ಫೆ.22: ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ವೇದಿಕೆ ಮೇಲೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಕುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯನವರು ವೇದಿಕೆ ಮೇಲೆ ಮಕ್ಕಳೊಂದಿಗೆ ನಗು ನಗುತ ಚರ್ಚೆ ಮಾಡುತ್ತಿದ್ದದ್ದು ಕಂಡು ಬಂತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನಿತ್ಯ 60 ಲಕ್ಷದಂತೆ ವಾರಕ್ಕೆ 1.80 ಕೋಟಿ ಮಕ್ಕಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ಸರ್ಕಾರ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದೆ. ಒಂದು ಎನ್ಜಿಒದವರು ಈ ಯೋಜನೆಯನ್ನು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದರು. ಅದು ಯಶಸ್ವಿಯಾಗಿದೆ. ಹೀಗಾಗಿ ಇದನ್ನು ಜಾರಿ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಕ್ಷೀರಭಾಗ್ಯದ ಹಾಲಿನ ಜೊತೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ನೀಡಲಾಗುತ್ತೆ.