ಹೊಸಪೇಟೆ (ವಿಜಯನಗರ) ಫೆಬ್ರವರಿ 02 : ಹಂಪಿ ಉತ್ಸವದ ಪ್ರಯುಕ್ತ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ವಿರೂಪಾಕ್ಷ ದೇವಸ್ಥಾನದ ಮುಂಭಾಗದಲ್ಲಿ ಫೆಬ್ರವರಿ 2ರಂದು ನಡೆದ ರಂಗೋಲಿ ಸ್ಪರ್ಧೆಯಲ್ಲಿ ಬಣ್ಣ- ಬಣ್ಣದ ರಂಗೋಲಿ ಚಿತ್ತಾರಗಳು ಹಂಪಿಯ ಉತ್ಸವಕ್ಕೆ ಮೆರುಗು ತಂದವು.
ರಂಗೋಲಿ ಸ್ಪರ್ಧೆಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯನಗರ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ ರಂಗಣ್ಣನವರ ಸೇರಿದಂತೆ ಜನಪ್ರತಿನಿಧಿಗಳು, ಹಲವು ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ರಂಗೋಲಿ ಸ್ಪರ್ಧೆಯಲ್ಲಿ ಒಟ್ಟು 74 ಮಹಿಳಾ ಸ್ಪರ್ದಿಗಳು ಭಾಗವಹಿಸಿದ್ದರು. ಬಗೆ-ಬಗೆಯ ರಂಗೋಲಿ ಚಿತ್ತಾರಗಳು ಹಬ್ಬದ ವಾತಾವರಣವನ್ನು ಸೃಷ್ಠಿಸಿದ್ದು ವಿಶೇಷವಾಗಿತ್ತು.