ಬಳ್ಳಾರಿ ಜ .27: ಕಂಪ್ಲಿ ವಿಧಾನ ಸಭಾ ಸದಸ್ಯರಾದ ಜೆಎನ್ ಗಣೇಶ್ ಅವರನ್ನು ಕರ್ನಾಟಕದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಅದೇಶ ಹೊರಡಿಸಿದೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಶುಕ್ರವಾರ ಜನವರಿ 26 ಗಣ- ರಾಜ್ಯೋತ್ಸವದಂದು ಶಾಸಕರಿಗೆ ಸರ್ಕಾರ ಬಿಗ್ ಗಿಫ್ಟ್ ನೀಡುವ ಮೂಲಕ ಹೊಸ ಜವಾಬ್ದಾರಿ ವಹಿಸಿದೆ. ಒಟ್ಟು 36 ಶಾಸಕರಿಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ನೇಮಕ ಆದೇಶ ಹೊರಡಿಸಿದೆ. ಈ ವೇಳೆ ಮಾತನಾಡಿದ ಕಂಪ್ಲಿ ಕ್ಷೇತ್ರದ ಶಾಸಕ ಜೆ ಎನ್ ಗಣೇಶ ಅವರು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕವಾಗಿರುವುದಕ್ಕೆ ತುಂಬಾ ಖುಷಿ ತಂದಿದೆ. ನನ್ನ ಮೇಲೆ ನಂಬಿಕೆ ಇಟ್ಟು ನನ್ನನು ರಾಜ್ಯ ಮಟ್ಟದಲ್ಲಿ ನಿಗಮ ಮಂಡಳಿಯ ಜವಾಬ್ದಾರಿ ವಹಿಸಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ನೀರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ಹೇಳಿದರು