ಬಳ್ಳಾರಿ,ಜ.26 : ಭಾರತ ಸಂವಿಧಾನದ ಆಶಯ ಮತ್ತು ಪ್ರಸ್ತಾವನೆಯ ಧ್ಯೇಯೋದ್ದೇಶಗಳನ್ನು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಮ್ಮಿಕೊಂಡಿರುವ “ಸಂವಿಧಾನ ಜಾಗೃತಿ ಜಾಥಾ” ಸ್ತಬ್ಧಚಿತ್ರ ವಾಹನಕ್ಕೆ ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಶುಕ್ರವಾರ ವಿಮ್ಸ್ ಮೈದಾನದಲ್ಲಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಚಿವರು, “ಸಂವಿಧಾನ ಜಾಗೃತಿ ಜಾಥಾ” ಸ್ತಬ್ಧಚಿತ್ರ ವಾಹನವು ಜ.26 ರಿಂದ ಫೆ.23 ರ ವರೆಗೆ ಜಿಲ್ಲೆಯಾದ್ಯಂತ ಸಂಚರಿಸಲಿದೆ. ಜ.26 ರಿಂದ ಫೆ.02 ರವರೆಗೆ ಬಳ್ಳಾರಿ ತಾಲ್ಲೂಕಿನಲ್ಲಿ, ಫೆ.02 ರಿಂದ 09 ರ ವರೆಗೆ ಸಿರುಗುಪ್ಪ ತಾಲ್ಲೂಕಿನಲ್ಲಿ, ಫೆ.10 ರಿಂದ 13 ರವರೆಗೆ ಕುರುಗೋಡು ತಾಲ್ಲೂಕಿನಲ್ಲಿ, ಫೆ.13 ರಿಂದ 16 ರವರೆಗೆ ಕಂಪ್ಲಿ ತಾಲ್ಲೂಕಿನಲ್ಲಿ ಹಾಗೂ ಫೆ.16 ರಿಂದ 23 ರ ವರೆಗೆ ಸಂಡೂರು ತಾಲ್ಲೂಕಿನಲ್ಲಿ ಸೇರಿದಂತೆ ಎಲ್ಲಾ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚರಿಸಲಿದ್ದು, ಜನಪ್ರತಿನಿಧಿಗಳು, ಸಂಘ ಸಂಘ ಸಂಸ್ಥೆಗಳ ಮುಖಂಡರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಭೋದಿಸಿದರು.
ಜಾಗೃತಿ ಮೂಡಿಸುವ ವಾಹನದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಪ್ರಸ್ತಾವನೆ ಭಾವಚಿತ್ರ ಮತ್ತು ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕುರಿತಾದ ಮಾಹಿತಿ ಫಲಕಗಳನ್ನು ಅಳವಡಿಸಲಾಗಿತ್ತು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತ, ಉಪ ಮಹಾಪೌರರಾದ ಬಿ.ಜಾನಕಿ, ಬಳ್ಳಾರಿ ವಲಯ ಪೆÇಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.