ನವದೆಹಲಿ,ಮಾ.22. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಾರ್ಟಿಗೆ ದೆಹಲಿ ಅಬಕಾರಿ ಅಕ್ರಮ ನೀತಿ ಮುಳುವಾಗಿದೆ. ಒಬ್ಬೊಬ್ಬ ಸಚಿವರು, ನಾಯಕರು ಜೈಲು ಸೇರುತ್ತಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಸದ ಸಂಜಯ್ ಸಿಂಗ್ ಬಳಿಕ ಅಬಕಾರಿ ನೀತಿಯಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಜೈಲು ಸೇರಿದ್ದಾರೆ. ಇಡಿ ಅಧಿಕಾರಿಗಳು ಕೇಜ್ರಿವಾಲ್ ಮನೆ ಮೇಲೆ ದಾಳಿ ನಡೆಸಿದ ಬಳಿಕ ಕೇಜ್ರಿವಾಲ್ ಬಂಧಿಸಿದ ಇಡಿ ಅಧಿಕಾರಿಗಳು ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಇತ್ತ ಕೇಜ್ರಿವಾಲ್ ರಿಮ್ಯಾಂಡ್ ಅರ್ಜಿ ಇದೇ ವೇಳೆ ವಿಚಾರಣೆ ನಡೆಸಲಾಗಿದೆ. ಸುದೀರ್ಘ ವಾದ ಪ್ರತಿವಾದ ಆಲಿಸಿದ ದೆಹಲಿಯ ರೋಸ್ ಅವೆನ್ಯೂ ನ್ಯಾಯಲಯ ಅರವಿಂದ್ ಕೇಜ್ರಿವಾಲ್ ಅವರನ್ನು 10 ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿದೆ.