ಬಳ್ಳಾರಿ,ಫೆ.16 : ಜಿಲ್ಲೆಯಾದ್ಯಂತ ಫೆ.18 ರಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಾತಿಗೆ ಪರೀಕ್ಷೆ ಹಾಗೂ ಸಮಾಜ ಕಲ್ಯಾಣ-ಹಿಂದುಳಿದ ವರ್ಗಗಳ ಇಲಾಖೆಯಿಂದ ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಎಸ್ಎಸ್ಸಿ, ಬ್ಯಾಂಕಿಂಗ್, ಆರ್ಆರ್ಬಿ ಹುದ್ದೆಗಳಿಗೆ ನೀಡಲಾಗುವ ತರಬೇತಿಗೆ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ಸಿ.ಆರ್.ಪಿ.ಸಿ. ಕಲಂ 144ರ ಮೇರೆಗೆ ನಿಭರ್ಂಧಿತ ಪ್ರದೇಶವೆಂದು ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಫೆ.18 ರಂದು ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಾತಿಗೆ ಪರೀಕ್ಷೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಮತ್ತು ಸಮಾಜ ಕಲ್ಯಾಣ-ಹಿಂದುಳಿದ ವರ್ಗಗಳ ಇಲಾಖೆಯಿಂದ ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಎಸ್ಎಸ್ಸಿ, ಬ್ಯಾಂಕಿಂಗ್, ಆರ್ಆರ್ಬಿ ಹುದ್ದೆಗಳಿಗೆ ನೀಡಲಾಗುವ ತರಬೇತಿಗೆ ಪ್ರವೇಶ ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಹಾಗೂ ಮಧ್ಯಾಹ್ನ 02.30 ರಿಂದ ಸಂಜೆ 04.30 ರ ವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜಿಲ್ಲೆಯ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿμÉೀಧಿಸಿದೆ.
ಆಯಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಮುಚ್ಚುವಂತೆಯೂ ಮತ್ತು ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.