ಬಳ್ಳಾರಿ; ಪರಿಶಿಷ್ಟ ಸಮುದಾಯದವರ ಕುಂದು ಕೊರತೆ ಸಭೆ
ಬಳ್ಳಾರಿ,ಸೆ.24 : ಪರಿಶಿಷ್ಟ ಸಮುದಾಯದವರ ಅಹವಾಲುಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಕಡೆಗಣಿಸದೇ ತಕ್ಷಣ ಸ್ಪಂದಿಸಿ, ಸಮಸ್ಯೆಗೆ ತ್ವರಿತ ಪರಿಹಾರ ಒದಗಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನತೆಯ ಸಮಸ್ಯೆಗಳು, ಸಮಸ್ಯೆಗಳ ಪರಿಹರಿಸುವಿಕೆ, ಕಾನೂನಿನ ತಿಳುವಳಿಕೆಯನ್ನು ಮೂಡಿಸುವುದು ಈ ಸಭೆಯ ಉದ್ದೇಶವಾಗಿದೆ ಎಂದರು.
ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಸಮಗ್ರವಾದ ಅರಿವನ್ನು ಮೂಡಿಸಿ, ಆ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರನ್ನು ಜಾಗೃತಗೊಳಿಸುವ ಉದ್ದೇಶವನ್ನಿಟ್ಟುಕೊಂಡು ಸಭೆಯನ್ನು ನಡೆಸಲಾಗುತ್ತಿದ್ದು, ಸಭೆಯ ಮೂಲಕ ತಮ್ಮ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹೇಳಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸುವಿಕೆಗೆ ಎಲ್ಲರೂ ಸಹಕರಿಸಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಪರಿಶಿಷ್ಟ ಸಮುದಾಯವರ ಕುಂದು ಕೊರತೆ ಸಭೆಯನ್ನು ಆಯೋಜಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸಲಾಗಿದೆ. ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳು (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತ್ರೆöÊಮಾಸಿಕ ಸಭೆ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಪರಿಶಿಷ್ಟರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಶೌಚಾಲಯ ಸೇರಿ ಇತರೆ ಸೌಲಭ್ಯಗಳನ್ನು ಮೊದಲ ಆದ್ಯತೆಯಾಗಿ ಪರಿಗಣಿಸಲಾಗುವುದು. ಅವುಗಳನ್ನು ಸ್ಥಳೀಯ ಶಾಸಕರ ಸಹಕಾರದ ಮೇರೆಗೆ ಹಂತ-ಹAತವಾಗಿ ಪರಿಹರಿಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ ಅವರು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ದೌರ್ಜನ್ಯ, ಜಾತಿನಿಂದನೆ ಹಾಗೂ ಇತರೆ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕುಂದು–ಕೊರತೆಗಳಿದ್ದರೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಬೇಕು ಎಂದರು.
ಸ್ಮಶಾನ ಭೂಮಿ, ಬಗರ್ಹುಕುಂ ರೈತರ ಸಮಸ್ಯೆಗಳು ಕಂದಾಯ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಸರ್ಕಾರಿ ಅಭಿಲೇಖಾಲಯ ಕಾರ್ಯಾಲಯದಲ್ಲಿ ಕಳೆದ 15 ವರ್ಷದ ಹಿಂದಿನ ಜಮೀನಿಗೆ ಸಂಬAಧಿಸಿದ ದಾಖಲೆ ಕೇಳಿದರೆ, ಸಿಗುವುದಿಲ್ಲ ಎಂದು ಸಮಜಾಯಿಷಿ ಹಿಂಬರಹ ನೀಡಿ ಕಳುಹಿಸುತ್ತಾರೆ ಎಂದು ದಲಿತ ಸಂಘದ ಮುಖಂಡರೊಬ್ಬರು ಸಭೆಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಭೂ ದಾಖಲೆ ಸುರಕ್ಷಾ ಕಾಯ್ದೆಯಡಿ ಜಿಲ್ಲೆಯ 5 ತಾಲ್ಲೂಕುಗಳ ಎಸಿ ಕಚೇರಿಗಳಲ್ಲಿನ ಭೂ ದಾಖಲೆಗಳನ್ನು ಸ್ಕಾö್ಯನ್ ಮಾಡಿ, ಕಂಪ್ಯೂಟರ್ನಲ್ಲಿ ಅಪ್ಲೋಡ್ ಮಾಡಿ ಶೇಖರಿಸಲಾಗುತ್ತಿದೆ. ಈಗಾಗಲೇ 25 ಲಕ್ಷ ದಾಖಲೆಗಳನ್ನು ಸ್ಕಾö್ಯನ್ ಮಾಡಿ ಇಡಲಾಗಿದೆ. ಆರು ತಿಂಗಳೊಳಗಾಗಿ ಪ್ರತಿ ದಾಖಲೆಯು ಜೆರಾಕ್ಸ್ ಪ್ರತಿ ಲಭಿಸಲಿದೆ ಎಂದು ಹೇಳಿದರು.
ಬಳ್ಳಾರಿ ತಾಲ್ಲೂಕಿನ ಕೆಲ ಗ್ರಾಮದಲ್ಲಿ ರುದ್ರಭೂಮಿ ಇಲ್ಲ, ಕೆಲವೆಡೆ ಇರುವ ರುದ್ರಭೂಮಿಗೆ ರಸ್ತೆ ಇಲ್ಲ. ಹೀಗೆ ಹಲವು ಕಾರಣಗಳಿಗೆ ಪರಿಶಿಷ್ಟರು ಹಳ್ಳ, ಕೊಳ್ಳ, ನದಿ ದಡದಲ್ಲೇ ಮೃತರ ಅಂತ್ಯ ಸಂಸ್ಕಾರ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿಗಳ ಎದುರು ಸಾರ್ವಜನಿಕರು ಪ್ರಸ್ತಾಪಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಕೂಡಲೇ ಸಮದ್ಯಾತ್ಮಕ ಗ್ರಾಮಗಳಲ್ಲಿನ ತೊಂದರೆ ಸರಿಪಡಿಸಲು ಕ್ರಮವಹಿಸಬೇಕು ಎಂದು ಬಳ್ಳಾರಿ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಇಲಾಖೆಯಿಂದ ನಿಯಮಿತವಾಗಿ ಸಭೆ ನಡೆಸಬೇಕು. ಸ್ಮಶಾನ ಭೂಮಿ, ವಸತಿ, ಶಿಕ್ಷಣ ಈ ಮೂರು ಪರಿಶಿಷ್ಟರ ಪ್ರಮುಖ ಸಮಸ್ಯೆಗಳಾಗಿದ್ದು, ಇವುಗಳ ನಿವಾರಣೆಗೆ ಅಧಿಕಾರಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕು. ಪರಿಶಿಷ್ಟ ಜಾತಿ ಹಾಗೂ ಸಮುದಾಯದವರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮತ್ತು ಇತರೆ ಸಮಸ್ಯೆಗಳ ಬಗ್ಗೆಯೂ ಗಮನಹರಿಸಬೇಕು ಎಂದು ದಲಿತ ಮುಖಂಡರು ಜಿಲ್ಲಾಧಿಕಾರಿಯವರಿಗೆ ಒತ್ತಾಯಿಸಿದರು.
ಹಲವು ದಿನಗಳಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರಿಶಿಷ್ಟರ ಸಮುದಾಯದ ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳ ಸಭೆ ನಡೆದಿದ್ದಿಲ್ಲ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸಭೆ ಆಯೋಜಿಸಿರುವುದು ಪ್ರಶಂಸನೀಯವಾಗಿದೆ ಎಂದು ದಲಿತ ಮುಖಂಡರು ಅಭಿನಂದನೆ ತಿಳಿಸಿದರು.
ಸಭೆಯಲ್ಲಿ ವಿವಿಧ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸಂಬAಧಿಸಿದ ಅಧಿಕಾರಿಗಳೊಡನೆ ಚರ್ಚಿಸಿ ತ್ವರಿತ ಪರಿಹಾರ ಒದಗಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ದಲಿತ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.