ಬೆಂಗಳೂರು, ಮಾರ್ಚ್ 5: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಇಂದು ನಡೆದ ರಾಜ್ಯದ ಕುಡಿಯುವ ನೀರು, ಬರ ನಿರ್ವಹಣೆ ಜಾನುವಾರು ಮೇವು, ಉದ್ಯೋಗ ಹಾಗೂ ಕೃಷಿ ವಿಷಯಗಳ ಕುರಿತು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ವಿಡಿಯೋ ಸಂವಾದದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಬಳ್ಳಾರಿ ಜಿಲ್ಲೆಯ ಕುಡಿಯುವ ನೀರು ಹಾಗೂ ಬರ ನಿರ್ವಹಣೆ, ಜಾನುವಾರು ಮೇವು ಬಗ್ಗೆ ಚರ್ಚೆ ನಡೆಸಿ ಬೇಸಿಗೆಯಲ್ಲಿ ಯಾವುದೇ ತೊಂದರೆ ಆಗದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು