ಹೊಸಪೇಟೆ (ವಿಜಯನಗರ) ಮಾ.22 : ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಬ್ಯಾಂಕಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಚುನಾವಣೆ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಚುನಾವಣೆಯ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸರಬರಾಜು ಪ್ರಕರಣಗಳು ಸಂಭವಿಸದAತೆ ತೀವ್ರ ಕಟ್ಟೆಚ್ಚರ ವಹಿಸಬೇಕು. ಈ ಹಿನ್ನೆಲೆಯಲ್ಲಿ ಅನುಮಾನಾಸ್ಪದ ಬ್ಯಾಂಕಿನ ವ್ಯವಹಾರಗಳ ಮೇಲೆ ತೀವ್ರ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಜಿಲ್ಲಾ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಲೋಕೇಶ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಬಾಲಕೃಷ್ಣ ಭಟ್ ಸೇರಿದಂತೆ ಇತರರು ಇದ್ದರು. ಸಭೆಯಲ್ಲಿ ವಿವಿಧ ಬ್ಯಾಂಕಿನ ಅಧಿಕಾರಿಗಳು ಇದ್ದರು.