ಬಳ್ಳಾರಿ,ಫೆ.03 : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಅಸ್ಪøಶ್ಯತೆ, ಅಸಮಾನತೆ ವಿರುದ್ಧ ಹೋರಾಡಿದವರು. ಶಿಕ್ಷಣದಿಂದ ಎಲ್ಲವನ್ನು ಸಾಧಿಸಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮೊಹಮ್ಮದಿಯ ಸಮೂಹ ಸಂಸ್ಥೆಗಳ ಚೇರ್ಮನ್ ಡಾ.ಎಡ್ರಿಸ್ ಉಮ್ರಿ ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಮೊಹಮ್ಮದಿಯ ಮಹಿಳಾ ಬಿ.ಎಡ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರಳಾದೇವಿ ಕಾಲೇಜಿನ ನಿವೃತ್ತ ಉಪನ್ಯಾಸಕ ಬಿ.ಶ್ರೀನಿವಾಸ ಮೂರ್ತಿ ಅವರು ಮಾತನಾಡಿ, ಪ್ರಪಂಚದಲ್ಲೇ ಶ್ರೇಷ್ಠ ಸಂವಿಧಾನ ಗ್ರಂಥವನ್ನು ರಚಿಸಿದ ಮಹಾನ್ ವ್ಯಕ್ತಿ ಅಂಬೇಡ್ಕರ್ ಅವರು. ಬಡತನದಿಂದ ಅಸ್ಪøಶ್ಯತೆ, ಅಸಮಾನತೆ ಹಾಗೂ ಹಲವು ಸಮಸ್ಯೆಗೆ ಗುರಿಯಾಗಿದ್ದರಿಂದ ಮುಂದೊಂದು ದಿನ ಬೇರೆ ಯಾರು ಸಹ ಇಂತಹ ಸಮಸ್ಯೆಗೆ ತುತ್ತಾಗಬಾರದೆಂದು ಸಂವಿಧಾನದ ರಚಿಸಿ ಸಮಾನತೆ ರೂಪಿಸಿಕೊಟ್ಟರು ಎಂದು ವಿವರಿಸಿದರು.
ಅಪ್ರತಿಮ ಚಿಂತಕ, ಪ್ರಜಾಪ್ರಭುತ್ವವಾದಿ, ಸಾಮಾಜಿಕ ಚಿಂತಕರಾಗಿದ್ದರು. ವಿದ್ಯಾರ್ಥಿಗಳು ಅಂಬೇಡ್ಕರ್ ರೀತಿ ಜ್ಞಾನ ಗ್ರಹಿಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ತಲುಪಲು ಶಿಕ್ಷಣ ಮಹತ್ತರವಾಗಿದೆ ಎಂದು ಹೇಳಿದರು.
ಅಂಬೇಡ್ಕರ್ ಬಗ್ಗೆ ತಿಳಿದುಕೊಳ್ಳಲು ಅವರ ಬದುಕು ಮತ್ತು ಬರಹ ಪುಸ್ತಕ ಓದಬೇಕು. ಗೌತಮ ಬುದ್ಧನ ತತ್ವಗಳಿಂದ ಪ್ರಭಾವಿತರಾದ ನಂತರ ಅವರು ದೃಷ್ಠಿಕೋನವೇ ಬದಲಾಯಿತು. ವಿದ್ಯಾರ್ಥಿ ಜೀವನದಲ್ಲಿ ದಿನದ 18 ಗಂಟೆಗಳ ಸಮಯವನ್ನು ವಿದ್ಯಾಭ್ಯಾಸಕ್ಕೆ ಮೀಸಲಿಟ್ಟಿದ್ದರು. ಈಗಿನ ವಿದ್ಯಾರ್ಥಿಗಳು ಸಹ ಸಮಯ ಮೀಸಲಿಟ್ಟು ಅಭ್ಯಾಸ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್, ಮೊಹಮ್ಮದಿಯ ಮಹಿಳಾ ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಮೈಮೂದ ಎಸ್ ಸೇರಿದಂತೆ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.