ಬೆಂಗಳೂರು, ಮಾರ್ಚ್ 4- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 5 ರಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಅವರು ಈ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ “ಕುಡಿಯುವ ನೀರು, ಬರ ನಿರ್ವಹಣೆ, ಜಾನುವಾರು ಮೇವು, ಉದ್ಯೋಗ ಹಾಗೂ ಕೃಷಿ” ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.