ಬಳ್ಳಾರಿ,ಮಾ.19 : ತುಂಗಾಭದ್ರಾ ಯೋಜನೆಯ ಎಡದಂಡೆ ಕಾಲುವೆ ಹಾಗೂ ಬಲದಂಡೆ ಕೆಳ ಮಟ್ಟದ ಕಾಲುವೆಯಡಿ ಹಿಂಗಾರು ಹಂಗಾಮಿಗೆ ಬೆಳೆದು ನಿಂತ ಬೆಳೆಗಳಿಗೆ ಕೊರತೆಯಾಗುವ ನೀರನ್ನು ಒದಗಿಸಲು ಮತ್ತು ಹಿಂಗಾರು ಹಂಗಾಮಿನಲ್ಲಿ ಲಭ್ಯವಾದ, ಬಳಕೆಯಾದ ಮತ್ತು ಉಳಿತಾಯವಾಗುವ ನೀರನ್ನು ನಿಂತ ಬೆಳೆಗಳಿಗೆ ಒದಗಿಸುವ ಕುರಿತು ಚರ್ಚಿಸಲು ಮಾ.21 ರಂದು ಸಂಜೆ 04 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3 ನೇ ಮಹಡಿಯ ಕೊಠಡಿ ಸಂಖ್ಯೆ.334 ರ ಸಮ್ಮೇಳನ ಸಭಾಂಗಣದಲ್ಲಿ 123 ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ.
ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.