ಕಾರ್ತಿಕ್ ಹಾಗೂ ನಮ್ರತಾ ಅವರ ಸ್ನೇಹ ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕವೂ ಮುಂದುವರೆದಿದ್ದು, ಈ ನಡುವಲ್ಲೇ ಇಬ್ಬರು ಹಸೆಮಣೆ ಮೇಲೆ ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಫೋಟೋ ನೋಡಿದ ಅಭಿಮಾನಿಗಳು ಆಶ್ಚರ್ಯ ಹಾಗೂ ಗೊಂದಲಕ್ಕೊಳಗಾಗಿದ್ದಾರೆ.

ನಮ್ರತಾ ಮತ್ತು ಕಾರ್ತಿಕ್ ಪಕ್ಕಾ ಸಂಪ್ರದಾಯಿಕ ಉಡುಪು, ಮದುವೆ ಗೆಟಪ್ ನಲ್ಲಿದ್ದು, ಇಬ್ಬರ ಈ ಫೋಟೋಗಳು ಅಭಿಮಾನಿಗಳಿಗೆ ಶಾಕ್ ನೀಡಿದೆ. ಫೋಟೋಗಳನ್ನು ನೋಡಿದ ಕೆಲವರು ಇಬ್ಬರಿಗೂ ಶುಭಾಶಯಗಳನ್ನು ಕೋರಿದ್ದಾರೆ.
ಆದರೆ, ಈ ಫೋಟೋಗಳ ಅಸಲಿಯತ್ತು ಬೇರೆಯದ್ದೇ ಇದೆ. ನಮ್ರತಾ ಹಾಗೂ ಕಾರ್ತಿಕ್ ಖ್ಯಾತ ಉದ್ಯಮಿ, ರಾಜಕಾರಣಿ ಟಿಎ ಶರವಣ ಅವರ ಚಿನ್ನದ ಮಳಿಗೆ ಶ್ರೀ ಸಾಯಿ ಗೋಲ್ಡ್ ಪ್ಯಾಲೆಸ್ ಬ್ರ್ಯಾಂಡ್ಗಾಗಿ ಜಾಹೀರಾತು ಚಿತ್ರೀಕರಣ ಮಾಡಿದ್ದಾರೆಂದು ತಿಳಿದುಬಂದಿದೆ.
ಇಬ್ಬರೂ ವಧು-ವರರಂತೆ ವೇಷ ತೊಟ್ಟು ಮೈತುಂಬ ಚಿನ್ನದ ಆಭರಣಗಳನ್ನು ತೊಟ್ಟು ಜಾಹೀರಾತು ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ರೆಸಾರ್ಟ್ ಒಂದರಲ್ಲಿ ಜಾಹೀರಾತಿನ ಚಿತ್ರೀಕರಣ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಟಿಎ ಶರವಣ ಕೂಡ ಜಾಹೀರಾತು ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ವಧು-ವರರಿಗೆ ಆಶೀರ್ವಾದ ಮಾಡುವ ದೃಶ್ಯದಲ್ಲಿ ಹಿರಿಯರಾಗಿ ಅವರು ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣದಲ್ಲಿ ಕಾರ್ತಿಕ್ ಹಾಗೂ ನಮ್ರತಾ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.