ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ದ ಎಫ್ ಐಆರ್ ದಾಖಲು ಮಾಡಲಾಗಿದೆ. ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿಎಫ್ ಐಆರ್ ದಾಖಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣಾ ಲಕ್ಷ್ಮೀ ಅವರು ಕೆ ಆರ್ ಪಿ ಪಿ ಪಕ್ಷದಿಂದ ಬಳ್ಳಾರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಸೋಲುಂಡಿದ್ದರು. ಆದರೆ ವಿಧಾನಸಭಾ ಚುನಾವಣೆಯ ಅಫಿಡವಿಟ್ ನಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಶ್ರೀನಿವಾಸ್ ರಂಗರೆಡ್ಡಿ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ಮಾಡಲಾಗಿದೆ.
ಜನವರಿ 8ರಂದು ಬಳ್ಳಾರಿಯ ಗಾಂಧಿ ನಗರ ಠಾಣೆಯಲ್ಲಿ ರಂಗರೆಡ್ಡಿ ಎಂಬವರು ದೂರು ದಾಖಲು ಮಾಡಿದ್ದು, ಆ ಬಳಿಕ ತನಿಖೆಗೆ ಅನುಮತಿ ನೀಡುವಂತೆ ಪೊಲೀಸರು ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.
ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕೂಡಲೇ ತನಿಖೆ ಆರಂಭಿಸುವಂತೆ ಆದೇಶ ನೀಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮಾರ್ಚ್07 ರಂದು ಪೊಲೀಸರು ಪ್ರಜಾ ಪ್ರತಿನಿಧಿ ಕಾಯ್ದೆ-1951, 1988 ಸೆಕ್ಷನ್ 125 (a) ಅನ್ವಯ ಎಫ್ಐಆರ್ ದಾಖಲು ಮಾಡಿದ್ದಾರೆ.