ಹೊಸಪೇಟೆ,ಏ.17: ಹೊಸಪೇಟೆ ಸಮೀಪದ ತುಂಗಭದ್ರಾ ಅಣೆಕಟ್ಟೆಯ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ.
ತುಂಗಭದ್ರಾ ಜಲಾಶಯದ ಬಲದಂಡೆಯ ಗುಡ್ಡಗಳ ಶ್ರೇಣಿಯಲ್ಲಿರುವ ವೈಕುಂಠ ಅತಿಥಿಗೃಹ, ಪವನ ವಿದ್ಯುತ್ ಯಂತ್ರಗಳಿರುವ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗುಡ್ಡದಲ್ಲಿರುವ ಪವನ ವಿದ್ಯುತ್ ಯಂತ್ರದ ಗಾಳಿಯ ರಭಸಕ್ಕೆ ಬೆಂಕಿಯ ಕಿಡಿ ಹೊತ್ತಿಕೊಂಡಿರಬಹುದು. ಅಥವಾ ಯಾರೋ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದಂತೆ ಕಾಣಿಸುತ್ತಿದೆ. ಇದು ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿಲ್ಲ. ಆದರೂ, ಅರಣ್ಯ ಸಿಬ್ಬಂದಿ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ತಹಬದಿಗೆ ಬಂದಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್ ಮಾಹಿತಿ ನೀಡಿದರು.