ಕಲಬುರಗಿ: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ(ಟಿ) ಗ್ರಾಮದ ಬಳಿ ಶುಕ್ರವಾರ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ.
ಇಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಸೇಡಂ ತಾಲ್ಲೂಕಿನ ಹಾಬಾಳ ಗ್ರಾಮದ ನಿವಾಸಿಗಳಾದ ಸಿದ್ದು (25), ಸುರೇಶ (20), ಮಲ್ಲಿಕಾರ್ಜುನ (20), ಪ್ರಕಾಶ್ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್ಗೆ ಎದುರಿನಿಂದ ಬರುತ್ತಿದ್ದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿವೆ.
ಪಲ್ಸರ್ ಮತ್ತು ಸ್ಪ್ಲೈಂಡರ್ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಲ್ಲಿಕಾರ್ಜುನ ಮತ್ತು ಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುರೇಶ ಹಾಗೂ ಪ್ರಕಾಶ್ ಇಬ್ಬರು ಆಸ್ಪತ್ರೆಗೆ ರವಾನಿಸಿದ ವೇಳೆ ಮೃತಪಟ್ಟಿದ್ದಾರೆ ಎಂದು ಸೇಡಂ ಪೊಲೀಸರು ತಿಳಿಸಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ.