ಬಳ್ಳಾರಿ,ಜು.10 : ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿ ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) 2023 ರ ಏ.01 ರಿಂದ 2024 ರ ಮಾ.31 ರ ವರೆಗಿನ ನಾಲ್ಕನೇಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜು.12 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ನ ನಜೀರ್ ಸಭಾಂಗಣದಲ್ಲಿ ನಿಗಸಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕರ್ನಾಟಕ (20 ಅಂಶ) ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.