ಹೊಸಪೇಟೆ (ವಿಜಯನಗರ) ಫೆಬ್ರವರಿ 03 : ಜಿಲ್ಲಾಡಳಿತವು ಈ ಭಾರಿ ಹಂಪಿ ಉತ್ಸವದ ಅಂಗವಾಗಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಕೃಷಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಡಳಿತವು ಮಾತಂಗ ಪರ್ವತ ಆವರಣದಲ್ಲಿ ಹಮ್ಮಿಕೊಂಡ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.
ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕಾರ ಅವರು ಸಿರಿಧಾನ್ಯ ಪಾಕ ಸ್ಪರ್ಧೆಯ ಸ್ಥಳಕ್ಕೆ ಭೇಟಿ ನೀಡಿದರು. ಮಹಿಳೆಯರು ಬಗೆಬಗೆಯ ದವಸಧಾನ್ಯಗಳಿಂದ ಸಿದ್ಧಪಡಿಸಿದ್ದ ತಿನಿಸುಗಳನ್ನು ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಸಹಾಯಕ ಆಯುಕ್ತರಾದ ಮಹದ್ ಅಲಿ ಅಕ್ರಮ ಷಾಹ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಈರಣ್ಣ ಬಿರಾದಾರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶರಣಪ್ಪ ಮುದಗಲ್, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಸೇರಿದಂತೆ ಇತರರು ಇದ್ದರು.