ಹಾವೇರಿ, ಜ.೨೦: ಜಿಲ್ಲೆಯ ಹಾನಗಲ್ನಲ್ಲಿ ಮಹಿಳೆ ಮೇಲೆ ಗ್ಯಾಂಗ್ರೇಪ್ ವಿಚಾರಕ್ಕೆ ಸಂಬAಧಿಸಿ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ. ಹಾನಗಲ್ನಲ್ಲಿ ಗ್ಯಾಂಗ್ರೇಪ್ ಪ್ರಕರಣ ಬಹಿರಂಗಗೊAಡಿದೆ. ನೈತಿಕ ಪೊಲೀಸ್ಗಿರಿ ಪ್ರಕರಣಗಳೂ ಬಹಿರಂಗವಾಗಿವೆ. ಇಂತಹ ಕೃತ್ಯ ಎಸಗುವ ಗ್ಯಾಂಗ್ ಸಕ್ರಿಯವಾಗಿದೆ. ಕೃತ್ಯಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಪ್ರಕರಣವನ್ನು SIಖಿ ತನಿಖೆಗೆ ಕೊಡಿ ಅಂದ್ರೂ ಸರ್ಕಾರ ನೀಡ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದು ಆರೋಪ ಮಾಡಿದ್ದಾರೆ. ಹಾನಗಲ್ನಲ್ಲಿ ಗ್ಯಾಂಗ್ ರೇಪ್ ಆಗಿದೆ, ನೈತಿಕ ಪೊಲೀಸ್ ಗಿರಿಯಂತಹ ಪ್ರಕರಣ ಹೊರಗೆ ಬರ್ತಿವೆ. ಇಂತಹ ಗ್ಯಾಂಗ್ ನಿರಂತರವಾಗಿ ಆ್ಯಕ್ಟೀವ್ ಆಗಿದೆ. ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಆಡಳಿತ ವ್ಯವಸ್ಥೆ, ಸರ್ಕಾರ ರೇಪಿಸ್ಟ್ಗಳ ಜೊತೆ ನಿಂತಿದೆ. SIಖಿಗೆ ಕೊಡಿ ಅಂದ್ರೂ ಸರ್ಕಾರ ಕೊಡ್ತಿಲ್ಲ. ಪೋಸ್ಕೋ ಕೇಸ್ನಲ್ಲಿ ಕೇಸ್ ದಾಖಲು ಮಾಡಿಲ್ಲ. ಸುಳ್ಳು ಮೆಡಿಕಲ್ ಎಕ್ಸಾಮಿನ್ ಆಗಿವೆ. ಇದು ಮೆಡಿಕೋ ಲೀಗಲ್ ಕೇಸ್, ಸರ್ಕಾರ ಸಂತ್ರಸ್ತೆ ಬಗ್ಗೆ ಜವಾಬ್ದಾರಿ ತಗೊಬೇಕು. ಸಿಎಂ ಶಾಸಕರಿಗೆ ಹೇಳಿದ್ದೀನಿ ಅಂತಾರೆ. ಅಂದ್ರೆ ಸರ್ಕಾರ ಸತ್ತಿದೆಯಾ? ಆರೋಗ್ಯ ಇಲಾಖೆ ಸತ್ತಿದೆಯಾ ಎಂದ ಬಸವರಾಜ್ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.
ಇನ್ನು ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕ್ರಿಮಿನಲ್ಗಳಿಗೆ ಕುಮಕ್ಕು ಸಿಗುತ್ತಿದೆ. ಅಪರಾಧ ಕೃತ್ಯ ಎಸಗಿದವರಲ್ಲಿ ವೋಟ್ ಬ್ಯಾಂಕ್ ಇದೆ. ಹೀಗಾಗಿ ಅವರ ರಕ್ಷಣೆ ಮಾಡುವ ಕೆಲಸವನ್ನ ಸರ್ಕಾರ ಮಾಡುತ್ತಿದೆ. ಹಾನಗಲ್ನಲ್ಲಿ ಗ್ಯಾಂಗ್ ರೇಪ್ ಪ್ರಕರಣವನ್ನ ಖಂಡಿಸಿ ನಾವು ಇವತ್ತು ಪ್ರತಿಭಟನೆ ಮಾಡುತ್ತಿದ್ದೇವೆ. ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಆದ್ರೂ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಅಂತಾರೆ. ಹಾಗಾದ್ರೆ ಇಬ್ಬರೂ ಪೊಲೀಸರನ್ನ ಅಮಾನತು ಮಾಡಿದ್ದು ಏಕೆ? ಆ ಹೆಣ್ಣು ಮಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡಿಸಲು ಇವರಿಂದ ಆಗಿಲ್ಲ. ಇಂತಹ ಘಟನೆಯಾದಾಗ ಸರ್ಕಾರವೇ ಸಂತ್ರಸ್ತರಿಗೆ ಚಿಕಿತ್ಸೆ ಕೊಡಿಸುವ ಕೆಲಸ ಮಾಡಬೇಕು.
ಈ ಪ್ರಕರಣವನ್ನ ಎಸ್ಐಟಿಗೆ ತನಿಖೆಗೆ ಕೊಡಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಆರ್.ಅಶೋಕ ಅವರು ಸಹ ಈ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೆ. ಹೋರಾಟಕ್ಕೆ ಸರ್ಕಾರ ಬಗ್ಗದೆ ಹೋದ್ರೆ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರದಲ್ಲಿ ನಿರ್ಭಯವಾಗಿ ಕ್ರಿಮಿನಲ್ಗಳು ಓಡಾಡುತ್ತಿದ್ದಾರೆ. ಪೊಲೀಸರೇ ಒಸಿ, ಇಸ್ಪೀಟ್ ಅಡ್ಡೆಗಳನ್ನ ಮಾಡಸ್ತೀದ್ದಾರೆ. ಇದಕ್ಕೆಲ್ಲ ಕಾರಣ ಪೊಸ್ಟಿಂಗ್ ನಲ್ಲಿ ಹಣ ಕೊಟ್ಟಿರೋದು. ಅಲ್ಪ ಸಂಖ್ಯಾತರಿಗೂ ನ್ಯಾಯ ಕೊಟ್ಟಿಲ್ಲ, ದಲಿತರಿಗೂ ನ್ಯಾಯ ಕೊಟ್ಟಿಲ್ಲ. ಕ್ರಿಮಿನಲ್ ಗಳಿಗೆ ಸರ್ಕಾರ ರಕ್ಷಣೆ ಕೊಡ್ತಿದೆ ಎಂದು ಬಸವರಾಜ ಬೊಮ್ಮಾಯಿಯವರು ವಾಗ್ದಾಳಿ ನಡೆಸಿದ್ದಾರೆ.