ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ.
ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, 11 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆರ್ ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಭಾರೀ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಜರಾಗುವಂತೆ ಸೂಚಿಸಲಾಗಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ 2022 ರ ಏಪ್ರಿಲ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.