ಬಳ್ಳಾರಿ, ಏ.15: ಯಾರೋ ಮಾಡಿದ ಕುತಂತ್ರದಿಂದ ಸಚಿವ ಸ್ಥಾನ ಕಳೆದುಕೊಂಡಿರುವ ಶಾಸಕ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಳ್ಳಾರಿ ನಗರ ಒತ್ತಾಯಿಸಿದರು.
ಬಳ್ಳಾರಿ ಹೊರ ವಲಯದ ಖಾಸಗಿ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ವೇದಿಕೆಯ ಮೇಲಿದ್ದ ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ನಾಸಿರ್ ಹುಸೇನ್ ಅವರನ್ನುದ್ಧೇಶಿಸಿ ಮಾತನಾಡಿದ ಶಾಸಕ ನಾರಾ ಭರತ್ ರೆಡ್ಡಿ; ಯಾರೋ ಮಾಡಿದ ಷಡ್ಯಂತ್ರದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಯಿತು, ಅವರಿಗೆ ಸಚಿವ ಸ್ಥಾನ ನೀಡಬೇಕು, ಅವರು ಸಚಿವರಾದರೆ ನಾನು ಬಳ್ಳಾರಿ ಜಿಲ್ಲಾ ಉಸ್ತುವಾರಿಯಾದಂತೆ ಎಂದರು.
ಸನ್ಮಾನಿತ ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ನಾಸಿರ್ ಹುಸೇನ್ ಅವರ ಕುರಿತು ಮಾತನಾಡಿದ ಶಾಸಕ ನಾರಾ ಭರತ್ ರೆಡ್ಡಿ; ಡಾ.ನಾಸಿರ್ ಹುಸೇನ್ ಅವರು ವಿದ್ಯಾರ್ಥಿ ದೆಸೆಯಿಂದ ಸಂಘಟನೆಯಲ್ಲಿ ತೊಡಗಿಕೊಂದವರು, ಅವರು ಇಂದು ಈ ಹಂತಕ್ಕೆ ಬರಲು ಸಾಕಷ್ಟು ಶ್ರಮಿಸಿದ್ದಾರೆ, ದೆಹಲಿಯ ಜವಾಹರಲಾಲ್ ನೆಹರೂ ವಿವಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಬದುಕು ಆರಂಭಿಸಿದ ಅವರು ಇಂದು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಮುಂದೊಂದು ದಿನ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಅವರು ಕೇಂದ್ರ ಮಂತ್ರಿ ಆಗುತ್ತಾರೆ, ಅವರು ನಮ್ಮಂಥವರಿಗೆ ಮಾದರಿ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತ ಶ್ರಮ ಬಹಳ ಇದೆ, ಕಾರ್ಯಕರ್ತರಿಗೆ ಬಲ ತುಂಬುವ ಕೆಲಸ ನಾಯಕರಿಂದ ಆಗಬೇಕು ಎಂದರು.