ಬಳ್ಳಾರಿ:ಫೆ.29: ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಗುರುವಾರ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ‘ಸಿ’ ಬ್ಲಾಕ್ ನ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 49 ರಲ್ಲಿನ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಶ್ರೀ ನಾರಾ ಭರತ್ ರೆಡ್ಡಿ ಅವರು ಮಹಾನಗರ ಪಾಲಿಕೆ ಮೇಯರ್ ಆದ ಶ್ರೀಮತಿ ಬಿ.ಶ್ವೇತ ಅವರು, ಉಪಮೇಯರ್ ಆದ ಶ್ರೀಮತಿ ಜಾನಕಮ್ಮ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು, ಸಹಾಯಕ ಆಯುಕ್ತ ಹೇಮಂತ್.ಎನ್ ಅವರು, ಡಿಎಂಎಫ್ ವಿಶೇಷಾಧಿಕಾರಿ ಪಿ.ಎಸ್.ಮಂಜುನಾಥ ಅವರು, ತಹಶೀಲ್ದಾರ ಗುರುರಾಜ ಅವರು ಸೇರಿದಂತೆ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.