ಕಾನೂನಿನ ಮೂಲಕ ಕೇಸ್ ಎದುರಿಸುತ್ತೇನೆ-ರೆಡ್ಡಿ
ಜೊತೆಗೆ ಇಂದು ಮದ ಎನ್ನುವುದು ಶಿವರಾಜ್ ತಂಗಡಗಿಗೆ ಬಹಳಷ್ಟು ಹೆಚ್ಚಿದೆ. ಮುಂದಿನ ದಿನಗಳಲ್ಲಿ ಜನ ಅವರಿಗೆ ಬುದ್ದಿ ಕಲಿಸುತ್ತಾರೆ. ಮುಂದೆ ಅವರಿಗೆ ಡೆಪಾಸಿಟ್ ಕೂಡ ಸಿಗಲ್ಲ. ಇನ್ನು ನಾನು ಡಿವೈಡರ್ ಮೂಲಕ ಹೋಗಿದ್ದೆ. ಆದರೆ, ಡ್ರೈವರ್ ಮೇಲೆ ಎಫ್ ಐಆರ್ ಆಗಿದೆ. ನಾನು ಕಾನೂನಿನ ಮೂಲಕ ಕೇಸ್ ಎದುರಿಸಲಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಇದೇ ಅ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಮಾರ್ಗವಾಗಿ ರಾಯಚೂರಿನಿಂದ ಜಿಂದಾಲ್ ಏರ್ಪೋರ್ಟ್ಗೆ ತೆರಳುತ್ತಿದ್ದರು. ಈ ವೇಳೆ ರೆಡ್ಡಿ ಕಾರು ಚಾಲಕ ಸಿಎಂ ಕಾನ್ವೆಗೆ ಎದುರಾಗಿ ಚಾಲನೆ ಮಾಡಿದ್ದ. ರೂಲ್ಸ್ ಬ್ರೇಕ್ ಹಿನ್ನೆಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಬಳಸುವ ರೇಂಜ್ ರೋವರ್, ಸ್ಕಾರ್ಪಿಯೊ ಹಾಗೂ ಫಾರ್ಚೂನರ್ ಸೇರಿ ಮೂರು ಕಾರಗಳ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಅದರಂತೆ ಇಂದು ಬೆಂಗಳೂರಿನಲ್ಲಿ ಸೀಜ್ ಮಾಡಲಾಗಿದೆ.
ಅಂದು ಸಿಎಂ ಸಂಚಾರ ಹಿನ್ನಲೆ ಗಂಗಾವತಿಯಲ್ಲಿ 20ಕ್ಕೂ ಹೆಚ್ಚು ನಿಮಿಷಗಳ ಕಾಲ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈ ವೇಳೆ ಗಂಗಾವತಿ ನಗರದ ಸಿಬಿಎಸ್ ಸರ್ಕಲ್ನಲ್ಲಿ ಶಾಸಕ ಜನಾರ್ದನ ರೆಡ್ಡಿ ಕೂಡ ಸಿಲುಕ್ಕಿದ್ದರು. ಬಹಳ ಸಮಯವಾದರೂ ವಾಹನ ಸಂಚಾರಕ್ಕೆ ಅವಕಾಶ ನೀಡದ ಹಿನ್ನಲೆ ರೋಡ್ನ ಡಿವೈಡರ್ ಮೂಲಕ ಜನಾರ್ದನ್ ರೆಡ್ಡಿ ಕಾರು ಚಾಲಕ, ಕಾನ್ವೇ ವಿರುದ್ದ ದಿಕ್ಕಿನಲ್ಲಿ ಕಾರು ಚಲಾಯಿಸಿಕೊಂಡು ಹೋಗಿದ್ದರು. ಬಳಿಕ ರೆಡ್ಡಿ ಕಾರು ಚಾಲಕ ರೂಲ್ಸ್ ಬ್ರೇಕ್ ಹಿನ್ನಲೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು.