ಮಾರ್ಚ್ 25 ಬೆಳಗ್ಗೆ ಬಿಜೆಪಿ ಸೇರ್ಪಡೆ
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ನಾಳೆ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ನಾಳೆ (ಮಾರ್ಚ್ 25) ಬೆಳಗ್ಗೆ 10ಕ್ಕೆ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ಎಲ್ಲಾ ಬೆಂಬಲಿಗರ ಅಭಿಪ್ರಾಯ ಪಡೆದಿದ್ದೇನೆ. ಇದಕ್ಕೆ ಎಲ್ಲಾ ಬೆಂಬಲಿಗರು ಒಪ್ಪಿಗೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಗೆ ಅತೀಚಿಕ್ಕ ವಯಸ್ಸಿನಿಂದಲೂ ಕೆಲಸ ಮಾಡಿದ್ದೇನೆ. ಮಧ್ಯೆದಲ್ಲಿ ಏನೆನ್ನೆಲ್ಲಾ ಆಯ್ತು. ಅದು ನಿಮಗೂ ಗೊತ್ತು. ನಾನು ಕೂಡ ಬಿಜೆಪಿ ಸೇರ್ಪಡೆಯಾಗೋದಕ್ಕೂ ಮುನ್ನ ಬೆಂಬಲಿಗರ ಜೊತೆ ಸಭೆ ಮಾಡಿದ್ದೇನೆ. ಪಕ್ಷದ ಬೆಂಬಲಿಗರು ಬಿಜೆಪಿ ಸೇರುವುದಕ್ಕೆ ಒಪ್ಪಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಜಯೇಂದ್ರ, ರಾಧಾ ಮೋಹನ್ ದಾಸ್ ನೇತೃತ್ವದಲ್ಲಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.