ಬಳ್ಳಾರಿ,ಸೆ.28: ಪಕ್ಷದ ಸಂಘಟನೆ ಹಾಗೂ ಶಕ್ತಿ ಹೆಚ್ಚಿಸಿಕೊಳ್ಳಲು ಆಂತರಿಕವಾಗಿ ಸದಸ್ಯತ್ವ ಅಭಿಯಾನ
ಚುರುಕುಗೊಳಿಸಬೇಕು. ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸಬೇಕು’ ಎಂದು ಜೆಡಿಎಸ್ ಪಕ್ಷದ ಹಿರಿಯ ನಾಯಕಿ ದೇವದುರ್ಗ ಶಾಸಕಿ ಕರೆಮ್ಮನಾಯಕರವರು ಮನವಿ ಮಾಡಿದರು. ಅವರು ಬಳ್ಳಾರಿಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಘಟಕದ ಸದಸ್ಯತ್ವ ನೋಂದಣಿ ಹಾಗೂ ಬೂತ್ ಸಮಿತಿ ಅಭಿಯಾನ ಕಾರ್ಯಕ್ರಮದ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಪಕ್ಷ ಬೇರು ಮಟ್ಟದಿಂದ ಗಟ್ಟಿಯಾದರೆ ಮಾತ್ರ ಜೆಡಿಎಸ್ ಹೆಮ್ಮರವಾಗಿ ಬೆಳೆಯುತ್ತದೆ. ಎಲ್ಲ ಸಮುದಾಯಗಳ ಜನರನ್ನು ಒಳಗೊಂಡು ನೋಂದಣಿ ಮಾಡುವ ಪ್ರಕ್ರಿಯೆ ನಡೆಸಬೇಕು ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಸಿ ಹೊಸಬರನ್ನು ಪಕ್ಷಕ್ಕೆ ಕರೆತನ್ನಿ. ಪ್ರತಿ ಬೂತ್ನಲ್ಲಿ ಕನಿಷ್ಠ ೧೫ ಪ್ರಾಮಾಣಿಕ ಸದಸ್ಯರನ್ನು ನೋಂದಣಿ ಮಾಡಿಸಿಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಯಾರು ಪಕ್ಷದ ಪರವಾಗಿ ದುಡಿಯುತ್ತಾರೆ ಮುಂದಿನ ಚುನಾವಣೆಯಲ್ಲಿ ನಿಮ್ಮ ಟಿಕೆಟ್ ನಿಮ್ಮ ಮತಕ್ಷೇತ್ರದಲ್ಲಿ ಎಷ್ಟು ಜನರಿಗೆ ಸದಸ್ಯತ್ವದ ನೋಂದಣಿ ಮಾಡಿಸಿದ್ದೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ’ ಎಂದು ತಿಳಿಸಿದರು. ಪಕ್ಷದ ಬಲವರ್ಧನೆಗಾಗಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ಕ್ಷೇತ್ರದಲ್ಲಿ ೧,೦೦೦ ಸದಸ್ಯತ್ವ ಮಾಡಿಸುವ ಗುರಿ ಹೊಂದಲಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಇದ್ದರೂ ನಮ್ಮ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸುವುದು ಪ್ರತಿಯೊಬ್ಬ ಕಾರ್ಯಕರ್ತರ ಜವಾಬ್ದಾರಿ ಎಂದರು.
ಸದಸ್ಯತ್ವ ಅಭಿಯಾನ ಮೂಲಕ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಾಗಿ ಆದ್ಯತೆ ನೀಡಲಾಗುತ್ತಿದ್ದು ನಗರದಲ್ಲಿ ಜೆಡಿಎಸ್ನ ಇಪ್ಪತ್ತೊಂದು ವಿಭಾಗದಲ್ಲಿಯೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಹಾಕುವಂತೆ ಚರ್ಚೆ ನಡೆಸಲಾಗುತ್ತದೆ ಎಂದು ಶಾಸಕಿ ಕರೆಮ್ಮನಾಯಕ ತಿಳಿಸಿದರು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿರವರ ಮೇಲಿನ
ಆರೋಪದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನ್ಯಾಯಲಯದ ವಿಚಾರಗಳನ್ನು ನಾನು ಚರ್ಚಿಸಲು ಇಷ್ಟಪಡಲ್ಲ ಅವು ಕಾನೂನು ಪ್ರಕಾರ ನಡೆಯಲಿ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಆಗಮಿಸಿ ಪಕ್ಷದ ಸಂಘಟನೆಯ ಸಭೆ ನಡೆಸಲಿದ್ದಾರೆಂದರು.
ಮುಡಾ ವುಚಾರದಲ್ಲಿ ಸಿದ್ದರಾಮಯ್ಯ ಅವರ ಮೇಲಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ಕಾನೂನಿನ ಚೌಕಟ್ಟಿನಂತೆ ನಡೆಯಲಿದೆಂದ ಅವರು ಸಂಡೂರು ಉಪ ಚುನಾವಣೆ ವಿಷಯ ಪಕ್ಷದ ವರಿಷ್ಟರಿಗೆ ಬಿಟ್ಟಿದ್ದು ಎಂದರು.
ಜಿಲ್ಲೆಯ ಪಕ್ಷದ ಉಸ್ತುವಾರಿ ಮುಖಂಡ ಮಂಹಾಂತೇಶ್ ಪಾಟೀಲ್ ಮಾತನಾಡಿ, ಈ ಜಿಲ್ಲೆಯಲ್ಲಿ ಪಕ್ಷ ಈ ಮೊದಲಿನಂತೆ ಹೆಚ್ಚು ಶಕ್ತಿಯುತವಾಗಿಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇವೆ. ಮತ್ತೆ ಮೊದಲಿನಂತೆ ಪಕ್ಷದ ಬಲರ್ಧನೆಗೆ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಮೂರುಸಾವಿರ ಸದಸ್ಯತ್ವ ಮಡುವ ಗುರಿ ಇದೆ ಎಂದು ಹೇಳಿದರು.
ಸಂಡೂರು ಉಪ ಚುನಾವಣೆಯಲ್ಲಿ ಸ್ರ್ಧೆ ಮಾಡಲು ತಾವು ಟಿಕೆಟ್ ಕೇಳಯವುದಾಗಿ ಪಕ್ಷದ ಜಿಲ್ಲಾ ಅಧ್ಯಕ್ಷ ಮೀನಳ್ಳಿ ತಾಯಣ್ಣ ಇದೇ ವೇಳೆ ಹೇಳಿದ್ದಾರೆ.ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಮಹಾಂತೇಶ್ ಪಾಟೀಲ್, ವಿಜಯನಗರ ಜಿಲ್ಲಾಧ್ಯಕ್ಷ ಕೊಟ್ರೇಶ್, ಅದ್ದಿಗೇರಿ ರಾಮಣ್ಣ, ಕುಮಾರಸ್ವಾಮಿ, ಕಿರಣಕುಮಾರ್,ಸೋಮಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.