ಬೆಂಗಳೂರು,ಜ,೧೯: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದರು. ಚಿತ್ರೋತ್ಸವದ ಕಲಾತ್ಮ ನಿರ್ದೇಶಕ ವಿದ್ಯಾಶಂಕರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.