ಬಳ್ಳಾರಿ,ಫೆ.06 : ಗ್ರಾಮಾಂತರ ತಾಲೂಕಿನ ಸಿಡಿಗಿನಮೊಳ, ರೂಪನಗುಡಿ ಮತ್ತು ಎತ್ತಿನ ಬೂದಿಹಾಳ ಗ್ರಾಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ, ರಾಷ್ಟ್ರೀಯ ಸೇವಾ ಯೋಜನೆ ಕೋಶ, ಯೆನಪೋಯ ಆಸ್ಪತ್ರೆ ಮಂಗಳೂರು ಮತ್ತು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ ಇವರ ಸಂಯುಕ್ತ ಆಶ್ರಯದಲ್ಲಿ ಯೆನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಮಂಗಳೂರಿನ ಉಪಕುಲಪತಿಗಳಾದ ವಿಜಯ್ ಕುಮಾರ್ ರವರ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ, ಕನ್ನಡಕ ವಿತರಣೆ ಹಾಗೂ ಚಿಕಿತ್ಸೆ ಶಿಬಿರವನ್ನು ಬಳ್ಳಾರಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳಾದ ಬಿ.ವೆಂಕಟೇಶ್ ಪ್ರಸಾದ್ ರವರು ಉದ್ಘಾಟಿಸಿದರು.
ಈ ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ರಕ್ತ ಹೀನತೆ ಪರೀಕ್ಷೆ, ಮಧುಮೋಮೇಹ ಪರೀಕ್ಷೆ, ಬಾಯಿ ಮತ್ತು ದಂತ ಪರೀಕ್ಷೆ, ಗರ್ಭಕಂಠದ ಪರೀಕ್ಷೆ, ಮಕ್ಕಳ ಆರೋಗ್ಯ ತಪಾಸಣೆ, ಸ್ತನದ ಪರೀಕ್ಷೆ, ಸಾಮಾನ್ಯ ಸ್ತ್ರೀ ರೋಗ ಪರೀಕ್ಷೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಚಿಕಿತ್ಸೆ ಹಾಗೂ ಕ್ಯಾನ್ಸರ್ ಸೇರಿದಂತೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಆರೋಗ್ಯ ಶಿಬಿರವು ಸಂಪೂರ್ಣ ಉಚಿತವಾಗಿದ್ದು ತಜ್ಞವೈದ್ಯರು ತಪಾಸಣೆ ಮಾಡಿ ಆರೋಗ್ಯದ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿ ಮುಂದಿನ ಎರಡು ವರ್ಷಗಳವರೆಗೆ ಯೆಪೋಯ ಆಸ್ಪತ್ರೆ, ಮಂಗಳೂರು ಇವರ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆಯು ಸಂಪೂರ್ಣವಾಗಿ ಉಚಿತವಾಗಿ ಇರುತ್ತದೆ, ಇದರಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಉಚಿತ ಔಷಧಿ ಹಾಗೂ ಆರೋಗ್ಯ ಕಾರ್ಡ್ ವಿತರಿಸಲಾಗುತ್ತದೆ, ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಅನಾರೋಗ್ಯ ಸಮಸ್ಯೆ ಉಂಟಾಗಿತ್ತಿದ್ದು, ಮುಂಜಾಗ್ರತವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಈ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಪರಿಶಿಷ್ಟ ಕಲ್ಯಾಣ ವರ್ಗಗಳ ಇಲಾಖೆಯ ಅಧಿಕಾರಿಗಳಾದ ವೆಂಕಟಗಿರಿ ದಳವಾಯಿ, ರಾಜ್ಯ ಎನ್ಎಸ್ಎಸ್ ಅಧಿಕಾರಿ ಡಾ.ಪ್ರತಪ್ ಲಿಂಗಯ್ಯ, ಡಿಎಚ್ಒ ರಮೇಶ್ ಬಾಬು, ರೂಪನ ಗುಡಿ ಜಿಲ್ಲಾ ಪಂಚಾಯತಿ ಉಸ್ತುವಾರಿಗಳು ಹಾಗೂ ಸಚಿವರ ಆಪ್ತ ಸಹಾಯಕರಾದ ಗೋವರ್ಧನ ರೆಡ್ಡಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ್, ಯೆನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಡಾ.ಅಶ್ವಿನಿ ಶೆಟ್ಟಿ, ಮಂಗಳೂರು, ಯೆನಪೋಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನೂರ್ ಮಂಗಳೂರು, ಯೆನಪೋಯ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು.