ಹೊಸಪೇಟೆ (ವಿಜಯನಗರ) ಮಾರ್ಚ 17 : ಭಾರತ ಚುನಾವಣಾ ಆಯೋಗವು 2024ರಲ್ಲಿ ಜರುಗಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಪಡಿಸಿ ಅಧಿಸೂಚನೆಯನ್ನು ಹೊರಡಿಸಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ 16ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾರ್ವತ್ರಿಕ ಲೋಕಸಭಾ ಚುನಾವಣೆಯು ಮೇ 7 ರಂದು ನಡೆಯಲಿದ್ದು, ಜೂನ್ 04ರಂದು ಮತಎಣಿಕೆ ನಡೆಯಲಿದೆ. ಚುನಾವಣಾ ನೀತಿ ಸಂಹಿತೆಯು ಮಾರ್ಚ 16 ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.
ಏಪ್ರೀಲ್ 12ರಂದು ಅಧಿಸೂಚನೆ ಹೊರಡಿಸಲಾಗುವುದು. ಏಪ್ರೀಲ್ 19ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಏಪ್ರೀಲ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಏಪ್ರೀಲ್ 22 ಕೊನೆಯ ದಿನವಾಗಿರುತ್ತದೆ. ಮೇ 7ರಂದು ಮತದಾನವು ಬೆಳಗ್ಗೆ 7 ಗಂಟೆಯಿAದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಜೂನ್ 6ರಂದು ಚುನಾವಣೆ ಪ್ರಕ್ರಿಯೆಯು ಸಂಪೂರ್ಣ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕೂಡ್ಲಿಗಿ, ಹಡಗಲಿ, ಹಗರಿಬೊಮ್ಮನಹಳ್ಳಿ, ವಿಜಯನಗರ ಕ್ಷೇತ್ರಗಳು ಮತ್ತು ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಸೇರಿ ಒಟ್ಟು 1234 ಮತಗಟ್ಟೆಗಳ ವ್ಯಾಪ್ತಿಯಲ್ಲಿ 5,57,385 ಪುರುಷರು ಹಾಗೂ 5,61,017 ಮಹಿಳೆಯರು ಮತ್ತು ಇತರೆ 141 ಸೇರಿ ಒಟ್ಟು 11,18,543 ಮತದಾರರು ಇದ್ದಾರೆ. 15,714 ಯುವಕರು ಮತ್ತು 13,282 ಯುವತಿಯರು ಮತ್ತು ಇತರೆ ಓರ್ವರು ಸೇರಿ ಒಟ್ಟು 28,997 18-19 ವಯೋಮಾನದ ಮತದಾರರು ಇದ್ದಾರೆ. 2456 ಪುರುಷರು ಮತ್ತು 4239 ಮಹಿಳೆಯರು ಸೇರಿ ಒಟ್ಟು 6695ರಷ್ಟು 80+ ವಯೋಮಾನದ ಮತದಾರರಿದ್ದಾರೆ. 8674 ಪುರುಷರು ಮತ್ತು 7184 ಮಹಿಳೆಯರು ಮತ್ತು ಇತರೆ ಐವರು ಸೇರಿ ಒಟ್ಟು 15,863 ವಿಕಲಚೇತನ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮತದಾರರ ಮಾಹಿತಿ ನೀಡಿದರು.
ಬಳ್ಳಾರಿ ಎಸ್.ಟಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 14 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಚೆಕ್ಪೋಸ್ಟ್ಗಳಲ್ಲಿ ಮೂವರು ಸ್ಟಾö್ಯಟಿಕ್ ಸರ್ವೆಲನ್ಸ್ ತಂಡದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಅದರಂತೆ ಪ್ರತಿ ಮತಕ್ಷೇತ್ರಕ್ಕೆ ಎಫ್ಎಸ್ಸಿ ಕೂಡ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರವಾಸಿ ಮಂದಿರಗಳಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಪ್ರವಾಸಿ ಮಂದಿರಗಳನ್ನು ರಾಜಕೀಯ ಪ್ರೇರಿತ ವ್ಯಕ್ತಿಗಳಿಗೆ ಹಾಗೂ ಮುಖಂಡರಿಗೆ ನೀಡದಂತೆ ಹಾಗೂ ಸದರಿ ಪ್ರವಾಸಿ ಮಂದಿರಗಳನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲು ಸ್ಥಳೀಯ ಆಡಳಿತಕ್ಕೆ ಸೂಚಿಸಿಲಾಗಿದೆ.
ಎಲ್ಲಾ ಚುನಾಯಿತರಾದ ಹಾಗೂ ನಾಮ ನಿರ್ದೇಶಿತಗೊಂಡ ರಾಜಕೀಯ ಮುಖಂಡರಿಗೆ ನೀಡಲಾಗಿರುವ ಸರ್ಕಾರಿ ವಾಹನ ಸೌಲಭ್ಯವನ್ನು ಅಧಿಗ್ರಹಣದ ಮೂಲಕ ಮರಳಿ ಪಡೆದು ಜಿಲ್ಲಾಡಳಿತದ ಅಧೀನದಲ್ಲಿ ಇಟ್ಟುಕೊಳ್ಳಲಾಗಿದೆ. ಚುನಾಯಿತ ಹಾಗೂ ನಾಮ ನಿರ್ದೇಶಿತಗೊಂಡಿರುವ ಅಧಿಕಾರೇತರ ಸದಸ್ಯರ ಚೇಂಬರ್ಗಳನ್ನು ಮುಚ್ಚಿಸಿ ಸೀಲ್ ಮಾಡಲು ಸೂಚಿಸಲಾಗಿದೆ.
ಜಿಲ್ಲೆಯಾದ್ಯಂತ ಮತದಾರರಿಗೆ ಪ್ರಭಾವಕ್ಕೊಳಪಡುವ ರಾಜಕೀಯ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ಯಾವುದೇ ಸಭೆ ಸಮಾರಂಭಗಳು ಅವಶ್ಯಕವಿದ್ದಲ್ಲಿ ಚುನಾವಣಾಧಿಕಾರಿಗಳ ಪರವಾನಿಗೆ ಪಡೆದ ನಂತರವೇ ಕಾರ್ಯಕ್ರಮ ಆಯೋಜಿಸಬೇಕೆಂದು ಸಾರ್ವಜನಿಕರಿಗೆ ತಿಳಿಸಲಾಗಿದೆ ಎಂದರು.
ಸಾರ್ವಜನಿಕರಲ್ಲಿ ಮನವಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ 16 ರಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆಯು ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ. ಈ ಚುನಾವಣೆಯ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಪಾಲಿಸುವಲ್ಲಿ ಜಿಲ್ಲಾಡಳಿತವು ಎಲ್ಲಾ ಅಗತ್ಯಕ್ರಮ ಜರುಗಿಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯು ಒಂದು ಅತ್ಯಂತ ಮಹತ್ವಪೂರ್ಣ ಹಾಗೂ ಪವಿತ್ರ ಕಾರ್ಯವಾಗಿದೆ. ಈ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ನಿಸ್ಪಕ್ಷಪಾತವಾಗಿ ಜರುಗುವಲ್ಲಿ ಪ್ರತಿಯೊಬ್ಬ ನಾಗರೀಕರು ಹಾಗೂ ಎಲ್ಲಾ ರಾಜಕೀಯ ಪಕ್ಷದವರು ಹಾಗೂ ಅಧಿಕಾರಿ ವರ್ಗದವರು ಸಕಾರಾತ್ಮಕವಾಗಿ ಕಾರ್ಯನಿರ್ವಹಿಸಿ ದೋಷರಹಿತವಾಗಿರುವಂತಹ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಅದಕ್ಕನುಗುಣವಾಗಿ ಕಾರ್ಯನಿರ್ವಹಿಸಿ ಸಹಕರಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿ ಅನುರಾಧ ಜಿ ಇದ್ದರು.