ಬಳ್ಳಾರಿ, ಎ.07: ಬಳ್ಳಾರಿ ಗ್ರಾಮೀಣ ಶಾಸಕ, ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಸೋಮವಾರ ‘ಸಲಾಂ ಬಳ್ಳಾರಿ ಅಭಿಯಾನ’ದ ಅಂಗವಾಗಿ ವಾರ್ಡ್ ಸಂಖ್ಯೆ 10ರ ವಿವಿಧ ಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಗೇಂದ್ರಣ್ಣರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲೆಯ ಎಲ್ಲಾ ಶಾಸಕರು ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಎಂದರು.
ಹಾಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಜಮೀರ್ ಅಹ್ಮದ್ ಕೂಡ ನಾಗೇಂದ್ರ ಅವಲೆ ಮಂತ್ರಿಯಾಗಬೇಕೆಂದು ಮನವಿ ಮಾಡಿದ್ದಾರೆ ಎಂದು ಹೇಳಿದ ಅವರು, ನಾಗೇಂದ್ರ ಅವರು ಮಂತ್ರಿಯಾಗಲೇಬೇಕು ಎಂದು ಒತ್ತಾಯಿಸಿದರು.
ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಮತ್ತು ನಾಗೇಂದ್ರ ಅವರು ಕಾಣೆಯಾಗಿದ್ದಾರೆ ಎಂಬ ವಿಪಕ್ಷದವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವೈಯಕ್ತಿಕ ಕಾರಣಗಳ ಹಿನ್ನೆಲೆ ನಾಗೇಂದ್ರ ಅವರು ಕ್…
ಕ್ಯಾಪ್ಷನ್: ‘ಸಲಾಂ ಬಳ್ಳಾರಿ ಅಭಿಯಾನ’ದ ಅಂಗವಾಗಿ ವಾರ್ಡ್ ಸಂಖ್ಯೆ 10 ಕ್ಕೆ ಶಾಸಕ ನಾರಾ ಭರತ್ ರೆಡ್ಡಿಯವರು ಭೇಟಿ ನೀಡಿದ ವೇಳೆ ಪಾತ ಕಮೇಲಾ ಬೀದಿಯಲ್ಲಿರುವ ಇಲಾಹಿ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ಜನರು ಶಾಸಕರನ್ನು ಸನ್ಮಾನಿಸಿದರು.