ಬಳ್ಳಾರಿ, ಫೆಬ್ರವರಿ.04 : ದೇಶ ವಿಭಜನೆಯ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆಯನ್ನು ಖಂಡಿಸಿ, ಬಿಜೆಪಿ ಯುವ ಮೋರ್ಚಾ ಬಳ್ಳಾರಿ ಜಿಲ್ಲೆ ವತಿಯಿಂದ ರಾಯಲ್ ವೃತ್ತದ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮೋರ್ಚ ಜಿಲ್ಲಾಧ್ಯಕ್ಷರು ಸೋಮಶೇಖರ್ ಗೌಡ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಾದಂತಹ ಅಡವಿ ಸ್ವಾಮಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದಂತ ರಾಘವೇಂದ್ರ ಹಾಗೂ ಜಿಲ್ಲಾ ಪದಾಧಿಕಾರಿಗಳು ಹಾಗೂ ಮಂಡಲ ಪದಾಧಿಕಾರಿಗಳು ಪಾಲ್ಗೊಂಡಿದ್ದರು