ಹೊಸಪೇಟೆ (ವಿಜಯನಗರ) ಫೆಬ್ರವರಿ 04: ಸಂಶೋಧನೆ ಮೂಲಕ ಯುವ ಪೀಳಿಗೆಗೆ ಇತಿಹಾಸ ಮತ್ತು ಪರಂಪರೆಯನ್ನು ತಿಳಿಸುವ ಕಾರ್ಯ ಆಗಬೇಕಾಗಿದೆ ಎಂದು ಎಂ.ಎಸ್.ದಿವಾಕರ ಅವರು ಹೇಳಿದರು.
ಹಂಪಿ ಉತ್ಸವ-2024ರ ಅಂಗವಾಗಿ ಜಿಲ್ಲೆಯ ಕಮಲಾಪುರ-ಹಂಪಿಯ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಕಮಲಾಪುರ-ಹಂಪಿಯ ಕಮಲ್ ಮಹಲ್ ಹತ್ತಿರದ ಪುರಾತತ್ವ ಇಲಾಖೆಯ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಫೆ.3 ಮತ್ತು 4ರಂದು ಎರಡು ದಿನಗಳ ಹಮ್ಮಿಕೊಳ್ಳಲಾದ “ವಿಜಯನಗರ ಅಧ್ಯಯನ ಕುರಿತು 26ನೇ ವಾರ್ಷಿಕ ವಿಚಾರ ಸಂಕಿರಣ’’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಜಯನಗರವು ಇಂದು ತನ್ನ ಗತವೈಭವವವನ್ನು ಮರಳಿ ಪಡೆದಂತಹ ಅನುಭವವನ್ನು ಹಂಪಿ ಉತ್ಸವದಲ್ಲಿ ನಾವಿಂದು ಕಾಣುತ್ತಿದ್ದೇವೆ. ನಮ್ಮ ಇತಿಹಾಸ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಂಶೋಧನೆಗಳು ಹೆಚ್ಚಾಗಬೇಕು. ಈ ಹಿನ್ನೆಲೆಯಲ್ಲಿ ವಿಜಯನಗರ ಅಧ್ಯಯನ ಕುರಿತಾದ ವಾರ್ಷಿಕ ವಿಚಾರ ಸಂಕಿರಣ ಕಾರ್ಯಕ್ರಮವು ಸಹಕಾರಿಯಾಗಿದೆ ಎಂದರು.
ವಿಜಯನಗರ ಶಾಸಕರಾದ ಹೆಚ್.ಆರ್.ಗವಿಯಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತç ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ ಶ್ರೀನಿವಾಸ ವಿ.ಪಾಡಿಗಾರ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾದ ಪ್ರಭುಲಿಂಗ ಎಸ್ ತಳಕೇರಿ, ಕಮಲಾಪುರ-ಹಂಪಿಯ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಉಪ ನಿರ್ದೇಶಕರಾದ ಡಾ ಆರ್.ಶೇಜೇಶ್ವರ ಸೇರಿದಂತೆ ಮತ್ತಿತರರಿದ್ದರು.