ದೆಹಲಿ,ಜ.೨೦: ಅಯೋಧ್ಯೆ ರಾಮಮಂದಿರ ಜನವರಿ ೨೨ಕ್ಕೆ ಉದ್ಘಾಟನೆ, ಈ ಸಮಯದಲ್ಲಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ದೇಶಾದ್ಯಂತ ತಮ್ಮ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ್ ಲಲ್ಲಾ ‘ಪ್ರಾಣ ಪ್ರತಿಷ್ಠಾ’ ಪ್ರಯುಕ್ತ ಈ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಕಂಪನಿಯ ಮೂಲಗಳು ತಿಳಿಸಿದೆ. ದೇಶವೇ ಈ ಪುಣ್ಯ ಕಾರ್ಯದಲ್ಲಿ ಮುಳುಗಿರುತ್ತದೆ. ಅಂದು ನಮ್ಮ ಕಂಪನಿಯ ಉದ್ಯೋಗಿಗಳು ಈ ದಿನವನ್ನು ಸಂಭ್ರಮಿಸಬೇಕು ಎಂದು ಹೇಳಿದ್ದಾರೆ.
ರಾಮ ಲಲ್ಲಾ ಪ್ರತಿಷ್ಠೆಯ ಸಂದರ್ಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಮಿಕರು ಭಾಗವಹಿಸುವ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಈ ರಜೆ ನೀಡಲಾಗಿದೆ. ಇನ್ನು ಕೇಂದ್ರ ಸರ್ಕಾರವು ಕೂಡ ತನ್ನ ಎಲ್ಲಾ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನದ ರಜೆಯನ್ನು ಘೋಷಣೆ ಮಾಡಿದೆ. ಅನೇಕ ರಾಜ್ಯಗಳು ಕೂಡ ರಜೆಯನ್ನು ಘೋಷಣೆ ಮಾಡಿದೆ.
ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಣೆ ಮಾಡಿದ ನಂತರ, “ದೇಶಾದ್ಯಂತ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳು ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಕೂಡ ರಜೆಯನ್ನು ನೀಡಿದೆ. ಮಹಾರಾಷ್ಟ್ರದ ಸೇರಿದಂತೆ ಅನೇಕ ರಾಜ್ಯ ಸರ್ಕಾರಗಳು ರಜೆ ಘೋಷಣೆ ಮಾಡಿದೆ.
ಜನವರಿ ೨೨ ರಂದು ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (ಎನ್ಎಸ್ಇ) ವಹಿವಾಟು ಸಹ ಮುಚ್ಚಲಾಗುತ್ತದೆ ಎಂದು ಹೇಳಲಾಗಿದೆ. ಇನ್ನು ರಾಮಮಂದಿರದ ಕಾರ್ಯಕ್ರಮಕ್ಕೆ ಅಯೋಧ್ಯೆ ಸಿದ್ಧಗೊಂಡಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಸಿದ್ಧ ವ್ಯಕ್ತಿಗಳು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳು ಮತ್ತು ಇತರ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.