Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸರ್ಕಾರ ನೌಕರರೊಂದಿಗಿನ ಸಂವಾದ : ಅಧಿಕಾರಿಗಳು ಹಾಗೂ ನೌಕರರು ಸರ್ಕಾರದ ಬೆನ್ನೆಲುಬು - ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 

ಬಳ್ಳಾರಿ,ಆ.11 :ಸರ್ಕಾರದ ಯಶಸ್ಸಿನಲ್ಲಿ ಮತ್ತು ಸಾರ್ವಜನಿಕ ಸೇವೆಯಲ್ಲಿ ರಾಜ್ಯದ ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಪಾತ್ರ ಅತ್ಯಂತ ಪ್ರಮುಖವಾಗಿದೆ. ನಾವೆಲ್ಲರೂ ಜನಸಾಮಾನ್ಯರ ಸೇವಕರಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆAಟ್ ಹಾಲ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಸರ್ಕಾರ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಾವೆಲ್ಲರೂ ಸರ್ಕಾರದ ಭಾಗವಾಗಿದ್ದು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಎನ್ನುವ ಭೇದವಿಲ್ಲದೆ ಜನರ ಏಳಿಗೆಗಾಗಿ ಶ್ರಮಿಸಬೇಕು. ಅಧಿಕಾರಿಗಳ ಜವಾಬ್ದಾರಿ ಕೇವಲ ಆಡಳಿತಕ್ಕೆ ಸೀಮಿತವಾಗಿರದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿದೆ ಎಂದು ತಿಳಿಸಿದರು.                                                                                                                 
ಈ ನಾಡನ್ನು ಮುನ್ನಡೆಸಿದ ಕೆಂಗಲ್ ಹನುಮಂತಯ್ಯ, ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ ಸೇರಿದಂತೆ ಅನೇಕ ಮಾಜಿ ಮುಖ್ಯಮಂತ್ರಿಗಳ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಅವರು, ವಿಧಾನಸೌಧವು ನಾಡಿನ ಪ್ರಜಾಸತ್ತಾತ್ಮಕ ಮೌಲ್ಯಗಳ ಸಂಕೇತವಾಗಿದೆ ಎಂದು ಪ್ರತಿಪಾದಿಸಿದರು.
*ಜನಸೇವೆಗೆ ಆದ್ಯತೆ:*
ರಾಜ್ಯದ ಸುಮಾರು 7 ಕೋಟಿ ಜನಸಂಖ್ಯೆಯಲ್ಲಿ ಅತ್ಯಲ್ಪ ಸಂಖ್ಯೆಯ ನೌಕರರು ಹಾಗೂ ಅಧಿಕಾರಿಗಳಿಗೆ ಸಾರ್ವಜನಿಕ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.
*ಇತಿಹಾಸ ಸೃಷ್ಟಿಸುವತ್ತ ಹೆಜ್ಜೆ:*
ಪ್ರಜಾಪ್ರಭುತ್ವದ ಮುಖ್ಯ ಅಂಗಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ರಾಜ್ಯದ ಪ್ರಗತಿ ಸಾಧ್ಯ. ಹಾಗಾಗಿ, ಇತಿಹಾಸವನ್ನು ಓದುವುದಕ್ಕಿಂತ ಅಥವಾ ಬರೆಯುವುದಕ್ಕಿಂತ ಹೊಸ ಇತಿಹಾಸವನ್ನು ಸೃಷ್ಟಿಸುವುದು ಮುಖ್ಯ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುವಂತೆ ಆಡಳಿತ ನಡೆಸಬೇಕು ಎಂದು ಅಭಿಪ್ರಾಯಪಟ್ಟರು.
*ತಾಲೂಕು ಮಟ್ಟದಲ್ಲಿಯೇ ವಾಸ, ಜನರ ಸಮಸ್ಯೆಗಳಿಗೆ ನೇರ ಸ್ಪಂದನೆ:*
ಸಾರ್ವಜನಿಕರ ಅರ್ಜಿಗಳು ಮತ್ತು ಕುಂದುಕೊರತೆಗಳು ಅನಗತ್ಯವಾಗಿ ಜಿಲ್ಲಾ ಅಥವಾ ರಾಜ್ಯ ಮಟ್ಟಕ್ಕೆ ತಲುಪಬಾರದು. ತಾಲೂಕು ಹಾಗೂ ಸ್ಥಳೀಯ ಮಟ್ಟದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಸೇರಿದಂತೆ ಸರ್ವ ಅಧಿಕಾರಿಗಳು ತಮ್ಮ ನಿಯೋಜಿತ ಕೇಂದ್ರ ಸ್ಥಾನದಲ್ಲೇ ವಾಸವಿರಬೇಕು. ಅಧಿಕಾರಿಗಳು ಕಚೇರಿಯಲ್ಲಿ ಕಡ್ಡಾಯವಾಗಿ ಲಭ್ಯವಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಸೂಚಿಸಿದರು.
*ಮನೆ ಬಾಗಿಲಿಗೆ ಖಾತಾ ತಲುಪಿಸುವ ಗುರಿ:*
ಗ್ರಾಮೀಣ ಪ್ರದೇಶದ ಸುಮಾರು 1 ಕೋಟಿ 11 ಲಕ್ಷ ಕುಟುಂಬಗಳಿಗೆ ಹಾಗೂ ನಗರ ಪ್ರದೇಶದ 25 ಲಕ್ಷ ಮನೆಗಳಿಗೆ ಯಾವುದೇ ಲಂಚದ ಹಂಗಿಲ್ಲದೆ, ಉಚಿತವಾಗಿ ಫೋಟೋ ಹಾಗೂ ಸಹಿ ಸಹಿತ ಖಾತಾ/ಪ್ರಮಾಣಪತ್ರಗಳನ್ನು ನೀಡುವ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ 5 ರಿಂದ 6 ತಿಂಗಳ ಅವಧಿಯಲ್ಲಿ ರಾಜ್ಯದ ಎಲ್ಲಾ ಪಂಚಾಯಿತಿ ಹಾಗೂ ಹೋಬಳಿಗಳಲ್ಲಿ ಈ ಪ್ರಮಾಣಪತ್ರಗಳನ್ನು ತಲುಪಿಸುವ ಕೆಲಸ ಪೂರ್ಣಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
*ಕರ್ನಾಟಕ ಮಾದರಿ:*
ರಾಜ್ಯ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ಮತ್ತು ಗ್ಯಾರಂಟಿಗಳನ್ನು ಇಂದು ದೇಶದ ಇತರ ರಾಜ್ಯಗಳೂ ಅನುಸರಿಸುತ್ತಿದ್ದು, ಕರ್ನಾಟಕ ಮಾದರಿ ರಾಷ್ಟçಮಟ್ಟದಲ್ಲಿ ಗುರುತಿಸಿಕೊಂಡಿದೆ. ಅಧಿಕಾರ ಎಂಬುದು ಕೇವಲ ಶಕ್ತಿಯ ಸಂಕೇತವಲ್ಲ, ಅದೊಂದು ಸಾರ್ವಜನಿಕ ಜವಾಬ್ದಾರಿ. ಬಸವಣ್ಣನವರ ಮಾರ್ಗದರ್ಶನದಂತೆ ‘ಜನಸೇವೆಯೇ ಜನಾರ್ದನ ಸೇವೆ’ ಎಂಬ ತತ್ವದಡಿಯಲ್ಲಿ ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಅಧಿಕಾರಿಗಳು ಚೌಕಟ್ಟಿನೊಳಗೆ ನಿಂತು ಕಾನೂನುಬದ್ಧವಾಗಿ ಜನರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಗೌರವದಿಂದ ಕಾಣಬೇಕು ಹಾಗೂ ಅವರ ಅಳಲನ್ನು ಆಲಿಸಿ ಸ್ಪಂದಿಸಬೇಕು. ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಂಡು, ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಪಾರದರ್ಶಕತೆ ತರಬೇಕು. ಜನರು ನೀಡಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು, ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ನಿಸ್ವಾರ್ಥವಾಗಿ ಜನಸೇವೆ ಮಾಡಬೇಕೆಂದು ಅವರು ತಿಳಿಸಿದರು.
*ಭ್ರಷ್ಟಾಚಾರಕ್ಕೆ ಶೂನ್ಯ ಸಹಿಷ್ಣುತೆ:*
ಸರ್ಕಾರದ ಕೆಲಸ ಕಾರ್ಯಗಳಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಎಸ್ಪಿ, ತಹಶೀಲ್ದಾರ್ ಹಾಗೂ ಕಮಿಷನರ್ ಮಟ್ಟದ ಅಧಿಕಾರಿಗಳಿಂದ ಹಿಡಿದು ಕೆಳಹಂತದ ಸಿಬ್ಬಂದಿಯವರೆಗೆ ಎಲ್ಲರ ಕೆಲಸವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಪ್ರತಿಯೊಂದು ಕಾಮಗಾರಿ ಹಾಗೂ ಯೋಜನೆಗಳ ಪಾರದರ್ಶಕತೆಗೆ ತಂತ್ರಜ್ಞಾನವನ್ನು ಬಳಸಬೇಕು. ಫಲಾನುಭವಿಗಳ ಆಧಾರ್, ಫೋಟೋ, ವಿಡಿಯೋ ಆಧರಿತ ದಾಖಲೆಗಳನ್ನು ನಮೂದಿಸಬೇಕು. ರಾಜ್ಯಾದ್ಯಂತ ಪಿಡಬ್ಲ್ಯೂಡಿ, ಬಿಬಿಎಂಪಿ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಎಲ್ಲ ದಾಖಲೆಗಳನ್ನು ಸ್ಕಾö್ಯನ್ ಮಾಡಿ ಡಿಜಿಟಲ್ ರೂಪಕ್ಕೆ ತರಲಾಗುತ್ತಿದೆ ಎಂದರು.
*ಅಧಿಕಾರಿಗಳ ಚಲನವಲನದ ಮೇಲೆ ಕಣ್ಣು:*
ತಾಲೂಕು ಮತ್ತು ಗ್ರಾಮ ಮಟ್ಟದ ಅಧಿಕಾರಿಗಳು, ಪಿಡಿಒ, ತಹಶೀಲ್ದಾರ್ ಹಾಗೂ ಇತರ ಇಲಾಖೆಯ ಸಿಬ್ಬಂದಿಯ ಭೇಟಿಯ ಸಮಯ ಹಾಗೂ ಚಟುವಟಿಕೆಗಳನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸ್ಥಳೀಯ ಮಟ್ಟದಲ್ಲಿ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಹಾಗೂ ಆಶ್ರಮಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ, ಬಿಸಿಊಟ ಮತ್ತು ನಿರ್ವಹಣೆಯನ್ನು ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.
ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಬೇಕು. ಮುಂಬರುವ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಗಳ ಜೊತೆಗೆ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಸಹ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಬಿಇಒ ಹಾಗೂ ಡಿಡಿಪಿಐಗಳು ಕ್ರಮ ವಹಿಸಬೇಕು ಎಂದರು.
ನಾವೆಲ್ಲರೂ ‘ಟೀಮ್ ಕರ್ನಾಟಕ'ವಾಗಿ ಕೆಲಸ ಮಾಡಬೇಕಿದೆ. ಪ್ರತಿಯೊಬ್ಬ ಸರ್ಕಾರಿ ನೌಕರನೂ ಜವಾಬ್ದಾರಿಯಿಂದ ಜನರ ಸೇವೆಗೆ ಬದ್ಧರಾಗಿರಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು, ಉಪಮುಖ್ಯಮಂತ್ರಿಯವರು ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಬರ ಪರಿಸ್ಥಿತಿ, ಬೆಳೆ ಹಾನಿ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಲಭ್ಯತೆ ಕುರಿತ ಮಾಹಿತಿ ಪಡೆದುಕೊಂಡರು.
ಈ ವೇಳೆ ಸಚಿವರಾದ ಪ್ರಿಯಾಂಕ್ ಖರ್ಗೆ, ಲಕ್ಷö್ಮಣ ಸವದಿ, ಸಂತೋಷ್ ಎಸ್. ಲಾಡ್, ಅಜಯ್ ಸಿಂಗ್, ವಿಜಯಾನಂದ ಕಾಶಪ್ಪನವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು, ಸಚಿವಾಲಯದ ಹಿರಿಯ ಅಧಿಕಾರಿಗಳು, ಹಾಗೂ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದಿಂದ ವಿಡಿಯೋ ಸಂವಾದದ ಮೂಲಕ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್, ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ. ಎನ್. ಬಸವರಾಜ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ- ಸಿಬ್ಬಂದಿ ಉಪಸ್ಥಿತರಿದ್ದರು.


Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?